ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣ ನಿಧನ

ಬೆಂಗಳೂರು : ಕ್ಯಾನ್ಸರ್‌ ಕಾಯಿಲೆಯಿಂದಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಕನ್ನಡದ ನಟಿ, ಖ್ಯಾತ ನಿರೂಪಕಿ ಅಪರ್ಣಾ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಆಪರ್ನ ಅವರಿಗೆ 51 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬನಶಂಕರಿಯ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಿರೂಪಣೆಯಷ್ಟೇ ಅಲ್ಲದೇ ಮಸಣದ ಹೂವು, ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲೂ ಅಪರ್ಣಾ ನಟಿಸಿ ಸೈ ಎನಿಸಿಕೊಂಡಿದ್ದರು.

ನಮ್ಮ ಮೆಟ್ರೋ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಧ್ವನಿ ನೀಡಿದ್ದ ಅಪರ್ಣಾ, ಮೂಡಲ ಮನೆ, ಮುಕ್ತ ಮುಕ್ತ ಮೊದಲಾದ ಧಾರಾವಾಹಿಗಳಲ್ಲೂ ನಟಿಸಿದ್ದರು. 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದ್ದರು. ನಂತರ ಭಾರತ ಸರ್ಕಾರದ ವಿವಿಧ ಕಾರ್ಯಕ್ರಮದ ನಿರೂಪಣೆ, ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದಕ್ಕೆ ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು. ಅಪರ್ಣಾ ತಂದೆ ಕನ್ನಡ ಪ್ರಭ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸಿದ್ದರು. ಬಹುಮುಖ ಪ್ರತಿಭೆಯ ಅಪರ್ಣಾ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಅಂಕಣ ಬರೆಯುವ ಮೂಲಕ ಓದುಗರಿಗೂ ಹತ್ತಿರವಾಗಿದ್ದರು.

Related posts

ಕನ್ನಡ ಭಾಷೆಯ ಬಗೆಗಿನ ಒಲವು ಎಲ್ಲರಲ್ಲೂ ಮೂಡಬೇಕು – ಜನಾರ್ದನ್ ಕೊಡವೂರು ​

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ