ಜಿಲ್ಲೆಯ ರೈತರು ಮೂರು ದಿನದೊಳಗೆ ಪಹಣಿ, ಆಧಾರ್‌ ಜೋಡಣೆ ಮಾಡಿಸಿಕೊಳ್ಳಬೇಕು – ಜಿಲ್ಲಾಧಿಕಾರಿ

ಉಡುಪಿ : ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್‌ ಜೋಡಣೆ ಆವಶ್ಯಕವಾಗಿರುವುದರಿಂದ ಜಿಲ್ಲೆಯ ರೈತರು ಮೂರು ದಿನದೊಳಗೆ ಪಹಣಿ, ಆಧಾರ್‌ ದಾಖಲಾತಿಗಳೊಂದಿಗೆ ಹಾಗೂ ಆಧಾರ್‌ ಜೋಡಣೆಯಾಗಿರುವ ಮೊಬೈಲ್‌ನೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್‌ ಜೋಡಣೆ ಮಾಡಿಸಿಕೊಳ್ಳಬಹುದು.

ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿದ್ದ ಭೂಮಾಲಕರು ಅವರ ಕುಟುಂಬಸ್ಥರು/ಸಂಬಂಧಿಕರು ಜಿಲ್ಲೆಯಲ್ಲಿದ್ದಲ್ಲಿ ಅವರಿಂದ ಮಾಹಿತಿ ಪಡೆದು ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್‌ ಜೋಡಣೆ ಮಾಡಿಸಬೇಕು. ಈ ಕಾರ್ಯವು ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರವೇ ಆಗುತ್ತಿದ್ದು, ಸೈಬರ್‌, ಗ್ರಾಮ ಒನ್‌ ಸೆಂಟರ್‌ ಇತ್ಯಾದಿ ಕಡೆಗಳಲ್ಲಿ ಮಾಡಲು ಅವಕಾಶ ಇಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !