ಬಸ್- ಬೈಕ್ ನಡುವೆ ಭೀಕರ ಅಪಘಾತ; ಪೌರಕಾರ್ಮಿಕ‌ ಸ್ಥಳದಲ್ಲೇ ಮೃತ್ಯು

ಉಡುಪಿ : ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಪುರಸಭೆ ಪೌರಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹಂಗಳೂರು ಬಳಿ ಗುರುವಾರ ರಾತ್ರಿ ಸಂಭವಿಸಿದೆ.

ಮೂಲತಃ ಬಾರಕೂರಿನ ನಿವಾಸಿ, ಕುಂದಾಪುರ ಪುರಸಭೆಯಲ್ಲಿ ಪೌರಕಾರ್ಮಿಕ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಂದರ (39) ಮೃತ ದುರ್ದೈವಿ. ಇವರು ಕೋಟೇಶ್ವರ ಕಡೆಯಿಂದ ಬೈಕ್‌ನಲ್ಲಿ ಸರ್ವಿಸ್ ರಸ್ತೆಯಲ್ಲಿ ಬರುತ್ತಿದ್ದಾಗ ಹೆದ್ದಾರಿಯಿಂದ ಖಾಸಗಿ ಬಸ್ ಡಿಪೋಗೆ ನುಗ್ಗುತ್ತಿದ್ದಾಗ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

ಅಪಘಾತದಿಂದ ತೀವ್ರ ಗಾಯಗೊಂಡ ಸುಂದರ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತ ಸುಂದರ್ ಅವರು ಕಳೆದ 15 ವರ್ಷಗಳಿಂದ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿದ್ದು, ನಾಲ್ಕು ತಿಂಗಳ ಹಿಂದಷ್ಟೇ ಖಾಯಂ ನೇಮಕಾತಿ ಆದೇಶ ಪಡೆದಿದ್ದರು.

Related posts

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ

ತಾಲೂಕು ಸರಕಾರಿ ಆಸ್ಪತ್ರೆ,‌‌ ಆರೋಗ್ಯ ಕೇಂದ್ರಗಳಿಗೆ ಅಧಿಕಾರಿಗಳ ಭೇಟಿ