ಇನ್ನೋವಾ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಂಭೀರ ಗಾಯ

ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯ ದುರ್ಗಾ ಪರಮೇಶ್ವರಿ ದೇವಾಲಯದ ಎದುರು ನವೆಂಬರ್ 19ರಂದು ಇನ್ನೋವಾ ಕಾರು ಹಾಗೂ ಮೀನು ಸಾಗಾಟದ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ರಿವರ್ಸ್ ತೆಗೆದುಕೊಳ್ಳುತ್ತಿದ್ದ ಇನ್ನೋವಾ ಕಾರಿಗೆ ಹಿಂದಿನಿಂದ ಬರುತ್ತಿದ್ದ ಮೀನು ಸಾಗಾಟದ ಕ್ಯಾಂಟರ್ ಢಿಕ್ಕಿ ಹೊಡೆದಿದೆ. ಕಾರಿನಲ್ಲಿ ಕೇರಳ ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇನ್ನು ಐವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಕೊಲ್ಲೂರು ದೇವಾಲಯದ ದರ್ಶನ ಮುಗಿಸಿ ಕೇರಳಕ್ಕೆ ಹಿಂತಿರುಗುತ್ತಿದ್ದ ಇನ್ನೋವಾ ಕಾರು, ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ತೆರಳಲು ರಿವರ್ಸ್ ತೆಗೆಯುತ್ತಿದ್ದ ವೇಳೆ ಹಿಂದಿನಿಂದ ಬಂದ ಕ್ಯಾಂಟರ್‌‌ಗೆ ಢಿಕ್ಕಿ ಹೊಡೆದಿದೆ.

ಘಟನೆಯ ಭೀಕರ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ