ನೆಲ್ಯಾಡಿ ಬಳಿ ಭೀಕರ ಅಪಘಾತ : ಮಾರುತಿ ಸ್ವಿಫ್ಟ್ ಕಾರು ಡಿವೈಡರ್ ಜಂಪ್; ಓರ್ವ ಮೃತ್ಯು

ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮಾರುತಿ ಸ್ವಿಫ್ಟ್ ಕಾರೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ.

ಮೃತರನ್ನು ಅರಿಯಡ್ಕ ನಿವಾಸಿ, ಕೂಲಿಕಾರ್ಮಿಕ ರಾಮಣ್ಣ ಪೂಜಾರಿ ಎಂಬವರ ಪುತ್ರ ಜಗದೀಶ್ (26) ಎಂದು ಗುರುತಿಸಲಾಗಿದೆ.

ಅವರ ಸ್ನೇಹಿತ ಕಾರು ಚಾಲಕ ಸಚಿನ್ ಎಂಬವರು ಗಾಯಗೊಂಡಿದ್ದಾರೆ. ಜಗದೀಶ್ ಹಾಗೂ ಅವರ ಸ್ನೇಹಿತರು ನಾಲ್ಕೈದು ಕಾರಿನಲ್ಲಿ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಗಡಿ ದೇವಸ್ಥಾನಕ್ಕೆ ಹೋದವರು ಅಲ್ಲಿಂದ ಹಿಂತಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಸಚಿನ್ ಚಲಾಯಿಸುತ್ತಿದ್ದ ಕಾರಿನಲ್ಲಿ ಜಗದೀಶ್ ಮಾತ್ರ ಇದ್ದರು ಎನ್ನಲಾಗಿದ್ದು, ವೇಗವಾಗಿ ಬಂದ ಕಾರು ಮಣ್ಣಗುಂಡಿಯಲ್ಲಿ ಡಿವೈಡರ್‍‌ಗೆ ಢಿಕ್ಕಿಯಾಗಿ ಡಿವೈಡರ್ ಮೇಲೆ ಏರಿ ನಿಂತಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ