ಮಗಳ ಖಾಸಗಿ ವೀಡಿಯೊಗಳನ್ನು ವೈರಲ್‌ ಮಾಡಿದ ತಂದೆ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಪುತ್ರಿ

ಪಡುಬಿದ್ರಿ : ತನ್ನ ಸ್ವಂತ ಮಗಳ ಖಾಸಗಿ ವಿಡಿಯೋಗಳನ್ನು ತಂದೆಯೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದರಿಂದ ಮನನೊಂದ ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ತಂದೆ ಆಸೀಫ್‌ ಯಾನೆ ಆಸೀಫ್‌ ಆಪದ್ಭಾಂದವನ ವಿರುದ್ಧ ಆತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಆಪದ್ಬಾಂಧವ ಆಸಿಫ್‌ ಎಂದೇ ಗುರುತಿಸಿಕೊಂಡಿರುವ ಪಡುಬಿದ್ರಿ ಸಮೀಪದ ಕಂಚಿನಟ್ಕ ನಿವಾಸಿ ಆಸಿಫ್‌ ಆರೋಪಿ. ಮಗಳ ವೀಡಿಯೊಗಳನ್ನು ವಾಟ್ಸಪ್‌ ಗ್ರೂಪ್‌ಗಳಲ್ಲಿ ಹಂಚಿಕೊಂಡಿರುವುದಕ್ಕೆ ತಾಯಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಆಸಿಫ್‌ ಪುತ್ರಿ ತೀರ್ಥಹಳ್ಳಿಯ ಸಂಬಂಧಿಕನೊಬ್ಬ ಯುವಕನನ್ನು ಪ್ರೀತಿಸುತ್ತಿದ್ದು, ಇದು ಆಸಿಫ್‌ಗೆ ಇಷ್ಟವಿರಲಿಲ್ಲ.

ಈ ಹಿನ್ನಲೆ ಯುವಕನನ್ನು ಮನೆಗೆ ಕರೆಸಿ ಹಲ್ಲೆ ಮಾಡಿದ್ದಲ್ಲದೆ ಇಬ್ಬರ ಮೊಬೈಲ್‌ ಕಸಿದುಕೊಂಡು ಅದರಲ್ಲಿದ್ದ ವೀಡಿಯೊ ಮತ್ತು ಫೋಟೊಗಳನ್ನು ತನ್ನ ಮೊಬೈಲ್‌ಗೆ ವರ್ಗಾಯಿಸಿಕೊಂಡಿದ್ದಾನೆ. ಬಳಿಕ ಅವುಗಳನ್ನು ವಾಟ್ಸಪ್‌ ಗ್ರೂಪ್‌ಗಳು ಸೇರಿ ವಿವಿಧ ಸೋಷಿಯಲ್‌ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದಕ್ಕೆ ಪತ್ನಿ ಆಕ್ಷೇಪಿಸಿದ್ದು, ಆಕೆಗೆ ಮತ್ತು ಪುತ್ರಿಗೆ ಹಲ್ಲೆಯನ್ನೂ ಮಾಡಿದ್ದಾನೆ. ಈ ಕುರಿತಾಗಿ ಪತ್ನಿಯು ಉಡುಪಿ ಸೆನ್‌ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಪತ್ನಿಯು ಉಚ್ಚಿಲದ ತನ್ನ ತಾಯಿ ಮನೆಯಲ್ಲಿದ್ದಾಗ ಅಲ್ಲಿಗೂ ಹೋಗಿ ಗಲಾಟೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ