ಹುತಾತ್ಮ ಯೋಧ ಅನೂಪ್ ಪೂಜಾರಿಗೆ ಸಂಸದರಿಂದ ಅಂತಿಮ ನಮನ

ಉಡುಪಿ : ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ಸಮೀಪದ ಬೀಜಾಡಿಯ ಅನೂಪ್ ಪೂಜಾರಿ ಅವರ ಅಂತ್ಯ ಸಂಸ್ಕಾರ ಇಂದು ಸಕಲ ಗೌರವಗಳೊಂದಿಗೆ ನಡೆಯಲಿದೆ.

ತೆಕ್ಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನೂಪ್ ಅಂತಿಮ ಯಾತ್ರೆ ನಡೆಯುತ್ತಿದ್ದು ನೂರಾರು ಜನ ಭಾಗಿಯಾಗಿದ್ದಾರೆ. ಅಂತಿಮ ಯಾತ್ರೆ ಬಳಿಕ ಹುತಾತ್ಮ ಯೋಧನ ದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು. ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಮಾಜಿ ಸಚಿವ ಸುನಿಲ್ ಕುಮಾರ್ ಈ ಸಂದರ್ಭ ಹುತಾತ್ಮ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.

ಬೀಜಾಡಿ ಗ್ರಾಮದ ಮನೆಯಲ್ಲಿ ಅಂತಿಮ ವಿಧಿವಿಧಾನ ನಡೆಯಲಿದ್ದು, ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Related posts

60 ಲಕ್ಷ ವೆಚ್ಚದಲ್ಲಿ ಹೆರ್ಗ ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

ಎ.6 ಬಿಜೆಪಿ ಸ್ಥಾಪನಾ ದಿನಾಚರಣೆ, ಎ.10 ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ

ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರೊಂದಿಗೆ ರಂಗಾಸಕ್ತರ ಸಂವಾದ