ಉಡುಪಿ ನಗರದ ಆಯುರ್ವೇದ ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ಲಕ್ಷಾಂತರ ರೂ.ನಷ್ಟ

ಉಡುಪಿ : ಉಡುಪಿ ನಗರದ ಹೊರವಲಯದ ಆಯುರ್ವೇದ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಬೆಳ್ಳಂಬೆಳಿಗ್ಗೆ ಈ ಅವಘಡ ಸಂಭವಿಸಿದ್ದು ಬೆಂಕಿ ನಂದಿಸಲು ಅಗ್ನಿಶಾಮಕ ದಳ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ.

ಉಡುಪಿಯ ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನ ಬಳಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಕಟ್ಟಡದ ನವೀಕರಣ ಕಾಮಗಾರಿ ನಡೆಯುತ್ತಿದ್ದುದರಿಂದ ಅದೃಷ್ಟವಶಾತ್ ರೋಗಿಗಳು ಇರಲಿಲ್ಲ. ಬೆಳಿಗ್ಗೆ ದೈನಂದಿನ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಬೆಂಕಿ ಅವಘಡವನ್ನು ಗಮನಿಸಿ ಮಾಹಿತಿ ನೀಡಿದ್ದಾರೆ. ಪ್ರಾರಂಭದಲ್ಲಿ ಕಟ್ಟಡದ ಮೇಲ್ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಮೊದಲ ಮಹಡಿಯಲ್ಲಿದ್ದ ಇಬ್ಬರು ಕಾರ್ಮಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗಲಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಗ್ನಿಶಾಮಕದ ಎರಡು ವಾಹನಗಳು ಜಿಟಿಜಿಟಿ ಮಳೆಯ ನಡುವೆಯೂ ಕಾರ್ಯಾಚರಣೆ ನಡೆಸುತ್ತಿದ್ದು, ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.

Related posts

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಫೆಬ್ರವರಿ 2025‌ರಲ್ಲಿ ನಡೆಯಲಿರುವ ಮಣಿಪಾಲ ವಾಣಿಜ್ಯೋದ್ಯಮ ಶೃಂಗಸಭೆಯ (MES) ಎಂಟನೇ ಆವೃತ್ತಿಯನ್ನು ಹೆಮ್ಮೆಯಿಂದ ಪ್ರಕಟಿಸಿದೆ.

ನೀರಿನ ಮೂಲ ಸಮರ್ಪಕವಾಗಿ ಬಳಸಿ – ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ಸಭೆಯಲ್ಲಿ ಡಿಸಿ ಸೂಚನೆ

ಹವ್ಯಾಸಿ ರಂಗಕರ್ಮಿ ಡಾ. ಭಾಸ್ಕರಾನಂದ ಕುಮಾರ್ ಅವರಿಗೆ ರಂಗಭೂಮಿ ಪ್ರಶಸ್ತಿ ಪ್ರದಾನ