ಕಿರಾಣಿ ಅಂಗಡಿಗೆ ಬೆಂಕಿ – ಲಕ್ಷಾಂತರ ರೂ.ನಷ್ಟ

ಕುಂದಾಪುರ : ನಗರದ ಚಿಕ್ಕನಸಾಲು ರಸ್ತೆಯಲ್ಲಿರುವ ಕಿರಾಣಿ ಅಂಗಡಿಯೊಂದಕ್ಕೆ ಬುಧವಾರ ಬೆಂಕಿ ಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಚಂದ್ರಶೇಖರ್ ಎಂಬವರಿಗೆ ಸೇರಿದ ಅಂಗಡಿಯಾಗಿದೆ.

ಮಾಲಕರು ಬೆಳಿಗ್ಗೆ ಅಂಗಡಿಯ ಬಾಗಿಲನ್ನು ತೆರೆದು ದೇವರಿಗೆ ದೀಪ ಹಚ್ಚಿ ಹತ್ತಿರದ ಶ್ರೀ ಮೈಲಾರೇಶ್ವರ ದೇವಸ್ಥಾನಕ್ಕೆ ಹೋಗಿದ್ದರು. ಕೆಲವೇ ನಿಮಿಷಗಳಲ್ಲಿ ಮರಳಿ ಬರುವುದರೊಳಗೆ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಂಗಡಿಯೊಳಗಿದ್ದ ಹೊಸ ಫ್ರಿಜ್, ಕಪಾಟು, ಶೋಕೇಸ್ ಮುಂತಾದ ಉಪಕರಣಗಳು, ಕಿರಾಣಿ ಸಾಮಗ್ರಿಗಳು ಸಂಪೂರ್ಣ ಸುಟ್ಟುಹೋಗಿವೆ. ಘಟನೆಯಲ್ಲಿ ಅಂದಾಜು 4 ಲಕ್ಷ ರೂ.ನಷ್ಟ ಸಂಭವಿಸಿದೆ.

Related posts

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ