ಚಲಿಸುತ್ತಿದ್ದ ಬಸ್ಸಿನಲ್ಲಿ ಕಾಣಿಸಿಕೊಂಡ ಬೆಂಕಿ : ಪ್ರಯಾಣಿಕರು ಬಚಾವ್

ಪಡುಬಿದ್ರಿ : ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್‌ಗೇಟ್ ಬಳಿ ಕಳೆದ ರಾತ್ರಿ ತಡೆ ರಹಿತ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಟೋಲ್ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ಸೇರಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಅಂತಿಮವಾಗಿ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಮೂಲಕ ಸಂಭಾವ್ಯ ಅವಘಢ ತಪ್ಪಿಸಿದೆ.

ಉಡುಪಿ ಕಡೆಗೆ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಮಂಜುನಾಥ ಹೆಸರಿನ ಖಾಸಗಿ ಬಸ್ಸಿನಲ್ಲಿ ಹೆಜಮಾಡಿಯ ಕಿರು ಟೋಲ್ ಗೇಟ್ ಬಳಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಚಾಲಕನ ಗಮನಕ್ಕೆ ಬಂದು ಬಸ್ ನಿಲ್ಲಿಸಿ ಕಾರ್ಯಾಚರಿಸಲಾಯಿತು. ಬಸ್ಸಿನ ತಾಂತ್ರಿಕ ದೋಷವೇ ಈ ಅವಘಢಕ್ಕೆ ಕಾರಣ ಎನ್ನಲಾಗಿದೆ. ಯಾವುದೇ ಸಾವು ನೋವು ಸಂಭವಿಸಿಲ್ಲ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ