ಪೆಟ್ರೋಲ್ ಬಂಕ್‌ನಲ್ಲಿದ್ದ ಜನರೇಟರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ; ಸಮಯಪ್ರಜ್ಞೆ ಮೆರೆದ ಕಾರ್ಮಿಕರು

ಉಡುಪಿ : ಪೆಟ್ರೋಲ್ ಬಂಕ್‌ನಲ್ಲಿದ್ದ ಜನರೇಟರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಕಾರ್ಮಿಕರು ಸಮಯಪ್ರಜ್ಞೆ ಮೆರೆದ ಪರಿಣಾಮ ಸಂಭವನೀಯ ಅವಘಡವೊಂದು ತಪ್ಪಿದ ಘಟನೆ ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ನಡೆದಿದೆ.

ಉಡುಪಿಯ ಸಿಟಿಬಸ್ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿಯ ಮುಖ್ಯ ರಸ್ತೆಯಲ್ಲಿರುವ ಪೆಟ್ರೋಲ್‌ ಪಂಪ್‌ನ ಜನರೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಪಂಪ್‌ನ ಸಿಬಂದಿಗಳು ಎಚ್ಚೆತ್ತು ಜನರೇಟ‌ರ್ ಅನ್ನು ರಾಷ್ಟ್ರೀಯ ಹೆದ್ದಾರಿಯ ಮುಖ್ಯ ರಸ್ತೆಗೆ ತಂದು ಬೆಂಕಿ ನಂದಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಪೆಟ್ರೋಲ್ ಪಂಪ್ ಸಿಬಂದಿಯ ಸಮಯ ಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ