ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಕಾರಿನಲ್ಲಿದ್ದ ನಾಲ್ವರು ಪಾರು..!

ಮಂಗಳೂರು : ಮಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾ‌ಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಿನ್ನೆ ಬುಧವಾರ ಸಂಭವಿಸಿದೆ.

ಮೇರಿಹಿಲ್‌ ಹೆಲಿಪ್ಯಾಡ್‌ಗೆ ಹೋಗುವ ರಸ್ತೆಯಲ್ಲಿ ಸಂಜೆ ವೇಳೆ ಸಂಚರಿಸುತ್ತಿದ್ದ ವೋಕ್ಸ್‌ವ್ಯಾಗನ್‌ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕಾರು ನಿಲ್ಲಿಸಿ ಕಾರಿನಲ್ಲಿದ್ದ ನಾಲ್ವರು ಕೂಡಲೇ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಕ್ಕಪಕ್ಕದಲ್ಲಿದ್ದವರು ನೀರು ತಂದು ಸುರಿದು ಬೆಂಕಿ ನಿಯಂತ್ರಿಸಿದರು. ಕದ್ರಿ ಅಗ್ನಿಶಾಮಕ ದಳದವರು ಕೂಡ ಆಗಮಿಸಿ ಕಾರ್ಯಾಚರಣೆ ನಡೆಸಿದರು. ಕಾರಿನ ಎಂಜಿನ್‌ ಭಾಗ ಸುಟ್ಟು ಹೋಗಿದೆ ಎನ್ನಲಾಗಿದೆ

Related posts

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್‌ರಿಂದ ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆ

ಡೊಂಗರಕೇರಿ ವೆಂಕಟರಮಣ ದೇವಳದಲ್ಲಿ ವೈಕುಂಠ ಏಕಾದಶಿ

ರಿವಾಲ್ವರ್ ಮಿಸ್ ಫೈರ್ – ಯುವಕನಿಗೆ ಗಾಯ