ಬೋಟ್‌ ಕಾರ್ಮಿಕರ ಕೈಗೆ ಸಿಕ್ಕಿ ಬಿದ್ದ ಮೀನು ಕಳ್ಳರು – ಓರ್ವನಿಗೆ ಧರ್ಮದೇಟು.. ಇಬ್ಬರು ಪರಾರಿ..

ಮಲ್ಪೆ : ಮಲ್ಪೆ ಮೀನುಗಾರಿಕೆ ಬಂದರಿನ ಜೆಟ್ಟಿಯಲ್ಲಿ ನಿಲ್ಲಿಸಲಾಗಿದ್ದ ಮೀನು ತುಂಬಿರುವ ಬೋಟ್‌ನಲ್ಲಿ ಕಳ್ಳರು ಸುಮಾರು 15 ಸಾವಿರ ರೂ. ಬೆಲೆ ಬಾಳುವ ಉತ್ತಮ ಜಾತಿಯ ಮೀನನ್ನು ಎಗರಿಸಲು ಮುಂದಾಗಿದ್ದ ವೇಳೆ ಬೋಟ್‌ನ ಕಾರ್ಮಿಕರ ಕೈಗೆ ಸಿಕ್ಕಿ ಬಿದ್ದು ಧರ್ಮದೇಟು ತಿಂದ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಶನಿವಾರ ರಾತ್ರಿ ಸುಮಾರು 12 ಗಂಟೆ ವೇಳೆಗೆ ಬಂದರಿನಲ್ಲಿ ನಿಲ್ಲಿಸಲಾಗಿದ್ದ ಬೋಟ್‌ಗೆ ಮೂವರು ಗದಗ ಮೂಲದವರೆನ್ನಲಾದ ಕಳ್ಳರು ಬಂದು ಬೋಟ್‌ನ ಕಾರ್ಮಿಕರು ಗಾಢ ನಿದ್ರೆಯಲ್ಲಿರುವುದನ್ನು ಗಮನಿಸಿ ಬೋಟ್‌ನ ಸ್ಟೋರೇಜ್‌ನ ಮುಚ್ಚಳ ತೆರೆದು ಅದರೊಳಗೆ ಒಬ್ಬನನ್ನು ಇಳಿಸಿದ್ದರು. ಅಲ್ಲಿಂದ ಕಳವು ಮಾಡುವಾಗ ಬೋಟ್‌ನ ಕಾರ್ಮಿಕನೋರ್ವನಿಗೆ ಎಚ್ಚರವಾಗಿ ಬೊಬ್ಬೆ ಹಾಕಿದ್ದ. ಬೋಟ್‌ನ ಮೇಲೆ ಇದ್ದವರಲ್ಲಿ ಇಬ್ಬರು ಓಡಿ ಹೋಗಿದ್ದು, ಒಬ್ಬ ಸ್ಟೋರೇಜ್‌ನ ಒಳಗೆ ಸಿಕ್ಕಿ ಹಾಕಿಕೊಂಡಿದ್ದ. ಬೋಟ್‌ನ ಕಾರ್ಮಿಕರು ಆತನನ್ನು ಹಿಡಿದು ವಿಚಾರಿಸಿ ಬೋಟು ಮಾಲಕರಿಗೆ ಒಪ್ಪಿಸಿದ್ದಾರೆ.

Related posts

ಮರದ ದಿಮ್ಮಿಗೆ ಮೀನುಗಾರಿಕಾ ಬೋಟ್ ಡಿಕ್ಕಿ : ಅಪಾರ ಹಾನಿ

ಮೆಸ್ಕಾಂ ಎಟಿಪಿ ಬಿಲ್ ಪಾವತಿ ಸೇವೆ ಪುನರಾರಂಭಿಸಿ : ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ

ಸಿಬಿಐ ಅಧಿಕಾರಿ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ