ತಾಲೂಕಿನಾದ್ಯoತ ಹಲವೆಡೆ ನೆರೆ : ಸ್ವತಃ ಫೀಲ್ಡಿಗಿಳಿದ ತಹಶಿಲ್ದಾರ್ ಪ್ರತಿಭಾ ಆರ್.

ಕಾಪು : ಎಡಬಿಡದೆ ಸುರಿದ ಭಾರೀ ಮಳೆಯಿಂದಾಗಿ ಕಾಪು ತಾಲೂಕಿನಾದ್ಯಂತ ಹಲವೆಡೆ ನೆರೆ ಪರಿಸ್ಥಿತಿ ಉಂಟಾಗಿತ್ತು.

ತಹಶಿಲ್ದಾರ್ ಪ್ರತಿಭಾ ಸುರಿಯುವ ಮಳೆಯನ್ನೂ ಕೂಡ ಲೆಕ್ಕಿಸದೆ ತಾವೇ ಸ್ವತಃ ಫೀಲ್ಡಿಗಳಿದು ನೆರೆ ಪ್ರದೇಶಕ್ಕೆ ಧಾವಿಸಿ ಬೋಟ್‌ನ ಮೂಲಕ ನೆರೆಯಲ್ಲಿ ಸಿಲುಕಿದವರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಿಗಿದರು.

ನೆರೆ ಸಂತ್ರಸ್ತರ ಮನ ಒಲಿಸಿ, ಕರೆತಂದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಲ್ಲಿಯೂ ಯಶಸ್ವಿಯಾದರು. ಬೆಳ್ಳೆ ಗ್ರಾಮದ ಪಡುಬೆಳ್ಳೆಯ ಭಟ್ಟಸಾಲಿನಲ್ಲಿ ಜಲಾವೃತಗೊಂಡಿದ್ದ ತುಕ್ರ ಮುಖಾರಿ ಅವರ ಮನೆಯ 9 ಮಂದಿ ಸದಸ್ಯರನ್ನು ತಹಶೀಲ್ದಾರ್ ಡಾ. ಪ್ರತಿಭಾ ಆರ್. ನೇತೃತ್ವದಲ್ಲಿ ರಕ್ಷಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಂದಾಯ ಪರಿವೀಕ್ಷಕ ಇಜ್ಜಾರ್ ಸಾಬಿರ್, ಗ್ರಾ.ಆ. ಅಧಿಕಾರಿ ಪ್ರದೀಪ್ ಕುಮಾರ್, ಗ್ರಾಪಂ ಉಪಾಧ್ಯಕ್ಷ ಶಶಿಧರ ವಾಗ್ಳೆ, ಗ್ರಾಪಂ ಸದಸ್ಯರು ಸಹಕರಿಸಿದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ