ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪುನೀತ್ ರಾಜಕುಮಾರ್ ಅವರಿಗೆ ಪುಷ್ಪ ನಮನ

ಉಡುಪಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಪ್ಪು ಅಭಿಮಾನಿಗಳ ಬಳಗ ಉಡುಪಿ ಜಿಲ್ಲೆ ಹಾಗೂ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಪ್ರೀತಿಯ ಪುನೀತ್ ರಾಜಕುಮಾರ್ ಅವರ ಮೂರನೇ ವರ್ಷದ ಪುಣ್ಯ ಸ್ಮರಣೆಯ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಡಿಎಚ್‌ಒ ಡಾ.ಐ.ಪಿ.ಗಡಾದ ಅವರು ಅಪ್ಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಅಪ್ಪು ಅಭಿಮಾನಿಗಳ ಬಳಗದಿಂದ ಗಿರೀಶ್ ಕಡ್ಡಿಪುಡಿ ಮಾತನಾಡಿ ಜಿಲ್ಲೆಯಲ್ಲಿ ಈ ವರೆಗೂ ಕೈಗೊಂಡ ಸಾಮಾಜಿಕ ಕೆಲಸಗಳ ಬಗ್ಗೆ ವಿವರಿಸಿದರು. ಡಿಎಚ್‌ಒ ಮಾತನಾಡಿ ಉಡುಪಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮುಂದಿನ ದಿನಗಳಲ್ಲಿ ಅಪ್ಪು ಅಭಿಮಾನಿ ಬಳಗದೊಂದಿಗೆ ಜಿಲ್ಲೆಯಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಹೆಚ್ಚಿನ ರೀತಿಯಲ್ಲಿ ಆಯೋಜಿಸಿ, ನೇತ್ರದಾನ, ರಕ್ತದಾನ, ಹೃದಯ ಸಂಬಂಧಿ ಕಾಯಿಲೆಗಳ ವಿಷಯಗಳು ಮತ್ತು ಬಡ ನಿರ್ಗತಿಕ ರೋಗಿಗಳಿಗೆ ಸಹಾಯ ಹಸ್ತ ಚಾಚುವುದರೊಂದಿಗೆ ಜೊತೆಯಾಗಲಿದ್ದೇವೆ ಎಂದರು.

ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಪುಷ್ಪ ನಮನ‌ಗೈದರು. ಅಪ್ಪು ಅಭಿಮಾನಿ ಬಳಗ ಉಡುಪಿ ಜಿಲ್ಲೆಯ ವತಿಯಿಂದ, ಪ್ರೀತಂ ಬಿ ಎಸ್, ಗುರುರಾಜ್ ಗಂಗಾಣಿ, ಮನು, ಗಗನ್ ವೀರೇಶ್, ರಕ್ಷಿತ್ ಹಾಗೂ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಮಹೇಶ್ ಗುಂಡಿಬೈಲು, ಸದಸ್ಯರು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ