ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

ಬೈಂದೂರು : ಬೈಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ 9 ಜನರನ್ನೊಳಗೊಂಡ ವ್ಯವಸ್ಥಾಪನಾ ಸಮಿತಿ ರಚಿಸಿ ಸರಕಾರವು ಶುಕ್ರವಾರ ಆದೇಶ ಹೊರಡಿಸಿದೆ.

ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನಾಗಿ, ಪಾಳಿಯಲ್ಲಿರುವ ಪ್ರಧಾನ ಅರ್ಚಕ, ಮಹಾಲಿಂಗ ನಾಯ್ಕ ಮೆಟ್ಟಿನಹೊಳೆ ಕಾಲ್ತೋಡು, ಧನಾಕ್ಷಿ ವಿಶ್ವನಾಥ ಯಡ್ತರೆ ಬೈಂದೂರು, ಸುಧಾ ಕೆ ಪಡುವರಿ ಬೈಂದೂರು, ಕೆ. ಬಾಬು ಶೆಟ್ಟಿ ತಗ್ಗರ್ಸೆ ಬೈಂದೂರು, ಸುರೇಂದ್ರ ಶೆಟ್ಟಿ ಕೋಟೇಶ್ವರ ಕುಂದಾಪುರ, ಅಭಿಲಾಷ್ ಪಿ.ವಿ ಮಂಗಳೂರು, ಯು. ರಾಜೇಶ್ ಕಾರಂತ್ ಉಪ್ಪಿನಕುದ್ರು ಕುಂದಾಪುರ, ರಘುರಾಮ ದೇವಾಡಿಗ ಆಲೂರು ಕುಂದಾಪುರ ಅವರನ್ನು ಆಯ್ಕೆ ಮಾಡಲಾಗಿದೆ. ದೇವಳದ ಕಾರ್ಯನಿರ್ವಾಹಕ ಅಧಿಕಾರಿಯನ್ನು ವ್ಯವಸ್ಥಾಪನಾ ಸಮಿತಿಯ ಪದನಿಮಿತ್ತ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಪ್ರಥಮ ಸಭೆಯಲ್ಲಿ ಸದಸ್ಯರ ಪೈಕಿ ಓರ್ವರನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸುವಂತೆ ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು