ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ; ಮೂರು ದಿನ ಶೋಕಾಚರಣೆ ಘೋಷಿಸಿದ ರಾಜ್ಯ ಸರಕಾರ

ಬೆಂಗಳೂರು : ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ರಾಜ್ಯ ಸರಕಾರ ಮೂರು ದಿನ ಶೋಕಾಚರಣೆ ಘೋಷಿಸಿದ್ದು, ನಾಳೆ (ಡಿಸೆಂಬರ್ 11) ರಾಜ್ಯಾದ್ಯಂತ ಸರಕಾರಿ ರಜೆ ಘೋಷಿಸಿದೆ.

ಎಸ್​ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ