ಸಿಪಿಐ ಮಾಜಿ ಜಿಲ್ಲಾ ಕಾರ್ಯದರ್ಶಿ ಬಿ ಕೆ ಕೃಷ್ಣಪ್ಪ ನಿಧನ

ಮಂಗಳೂರು : ಭಾರತ ಕಮ್ಯೂನಿಸ್ಟ್‌ನ ಮಾಜಿ ಜಿಲ್ಲಾ ಕಾರ್ಯದರ್ಶಿ, ಪಕ್ಷದ ರಾಜ್ಯ ನಿಯಂತ್ರಣ ಮಂಡಳಿ ಸದಸ್ಯರಾಗಿದ್ದ ಬಿ.ಕೆ.ಕೃಷ್ಣಪ್ಪ ರವರು ಮಂಗಳವಾರ ರಾತ್ರಿ 8 ಗಂಟೆಗೆ ಅವರ ಸ್ವಗೃಹ‌ದಲ್ಲಿ ನಿಧನರಾದರು.

ಅವರು ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ‌ಯಾಗಿ, ಮುನಿಸಿಪಾಲ್ ಯೂನಿಯನ್‌ನ ಮುಖಂಡರಾಗಿ ಹಲವಾರು ವರ್ಷಗಳ ಕಾಲ ದುಡಿದಿರುತ್ತಾರೆ. ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾಗಿ ಪಂಜಿಮೊಗರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿರುತ್ತಾರೆ. ತನ್ನ ಅನುಭವಯುಕ್ತ ಭಾಷಣದ ಮೂಲಕ ಜನರನ್ನು ಆಕರ್ಷಿಸುವ ಸಾಮರ್ಥ್ಯ ಹೊಂದಿದ್ದರು. ಇವರ ನಿಧನದಿಂದ ಪಕ್ಷ‌ಕ್ಕೆ ತುಂಬಲಾರದ ನಷ್ಟವಾಗಿದೆ. ಇವರ ನಿಧನಕ್ಕೆ ಮಂಗಳೂರಿನ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ, ಪಕ್ಷದ ಮಾಜೀ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್, ಜಿಲ್ಲಾ ಕಾರ್ಯದರ್ಶಿ ಬಿ.ಶೇಖರ್, ಎಐಟಿಯುಸಿ ಜಿಲ್ಲಾಧ್ಯಕ್ಷ ಎಚ್.ವಿ.ರಾವ್, ಕಾರ್ಯದರ್ಶಿ ವಿ.ಎಸ್ ಬೇರಿಂಜ, ಆರ್ ಡಿ ಸೋನ್ಸ್, ಪ್ರಭಾಕರ ರಾವ್, ಎಂ.ಕರುಣಾಕರ, ಸುರೇಶ್ ಕುಮಾರ್, ಜಗತ್ ಪಾಲ್ ಕೋಡಿಕಲ್ ಸಂತಾಪ ಸೂಚಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ನಾಪತ್ತೆಯಾಗಿರುವ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸಲು ಗಂಟಿಹೊಳೆ ಆಗ್ರಹ

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ