ಮಾನವೀಯ ಕಾರ್ಯಕ್ಕೆ ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಮೆಚ್ಚುಗೆ; 25‌ನೇ ಮನೆ ಹಸ್ತಾಂತರ

ಶಿರ್ವ : ಉಡುಪಿಯ ಸಮಾನ ಮನಸ್ಕ ಯುವಕರ ತಂಡವೊಂದು ಬಡವ ಮಹಿಳೆ ಲಕ್ಷ್ಮೀ ಅವರಿಗಾಗಿ ನಿರ್ಮಿಸಿಕೊಟ್ಟಿರುವ 25‌ನೇ ಮನೆಯ ಹಸ್ತಾಂತರ ಕಾರ್ಯಕ್ರಮ ಕುಕ್ಕೆಹಳ್ಳಿಯಲ್ಲಿ ನಡೆಯಿತು.

ನಿವೃತ್ತ ಲೋಕಾಯುಕ್ತ ಡಾ|ಸಂತೋಶ್ ಹೆಗ್ಡೆ 25‌ನೇ ಮನೆಯನ್ನು ಹಸ್ತಾಂತರಿಸಿ ಶುಭ ಹಾರೈಸಿದರು. ಇದೊಂದು ಸುಂದರ ಹಾಗೂ ಅರ್ಥಪೂರ್ಣವಾದ ಕಾರ್ಯಕ್ರಮ. ಇಂತಹ ಕಾರ್ಯಕ್ರಮದಿಂದ ಸಮಾಜದ ಜನರಲ್ಲಿ ಉತ್ತಮವಾದ ಮಾನವೀಯತೆಯ ಮೌಲ್ಯವನ್ನು ಮೈಗೂಡಿಸಿಕೊಳ್ಳಲು ಸಾಧ್ಯ. ಮನುಷ್ಯರಾಗಿ ಹುಟ್ಟಿದ ಮೇಲೆ ಜೀವನದಲ್ಲಿ ಮಾನವೀಯತೆಯನ್ನು ಅಳವಡಿಸಿಕೊಂಡಾಗ ಮಾನವರಾಗುತ್ತಾರೆ. ಈ ನೆಲೆಯಲ್ಲಿ ಇಂತಹ ಕಾರ್ಯಕ್ರಮಗಳು ಇನ್ನಷ್ಟು ನಡೆಯಲಿ ಎಂದರು.

ತಂಡದ ಮುಖ್ಯಸ್ಥರಾದ ಶಶಿಧರ ಪುರೋಹಿತ್ ಕಟಪಾಡಿ ಮಾತನಾಡಿ, ಇಂದು ಕುಕ್ಕೆಹಳ್ಳಿಯಲ್ಲಿ 25ನೇ ಮನೆ ಹಸ್ತಾಂತರಗೊಂಡಿದ್ದು ಇನ್ನೂ ಮೂರು ಮನೆಗಳು ನಿರ್ಮಾಣ ಹಂತದಲ್ಲಿವೆ. ತಂಡವು ವಾಟ್ಸಾಪ್ ಗ್ರೂಪ್ ರಚಿಸುವುದರ ಮೂಲಕ ಒಂದು ಮನೆಯ ನಿರ್ಮಾಣಕ್ಕೆ 50-60 ಮಂದಿಯನ್ನು ಆ ಗ್ರೂಪ್‌ನಲ್ಲಿ ಸೇರಿಸಿಕೊಂಡು ಹಣ ಹಾಗೂ ವಸ್ತು ರೂಪದ ಮೂಲಕ ದಾನವನ್ನು ಪಡೆದು ಮನೆಗಳನ್ನು ನಿರ್ಮಿಸುತ್ತಿದೆ. ಈ ವರೆಗೆ 25 ಮನೆಗಳ ನಿರ್ಮಾಣಕ್ಕಾಗಿ ಸುಮಾರು ರೂ 2.5 ಕೋಟಿಯಷ್ಟು ಹಣ ವ್ಯಯಿಸಿದ್ದು ಎಲ್ಲವೂ ದಾನಿಗಳ ನೆರವಿನಿಂದ ಸಾಧ್ಯವಾಗಿದೆ ಎಂದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು