ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆಕೂಳೂರು ಸೇತುವೆಯಲ್ಲಿ ಅಪಘಾತವಾದ ಸ್ಥಿತಿಯಲ್ಲಿ ಕಾರು ಪತ್ತೆ

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಆಲಿ(52) ದಿಢೀರ್ ನಾಪತ್ತೆಯಾಗಿದ್ದು, ಕೂಳೂರಿನ ಸೇತುವೆಯ ಮೇಲೆ ಅವರ ಕಾರು ಪತ್ತೆಯಾಗಿದೆ.

ಶನಿವಾರ ನಸುಕಿನ ವೇಳೆ 3ಗಂಟೆ ಸುಮಾರಿಗೆ ಮುಮ್ತಾಜ್ ಆಲಿ ಮನೆಯಿಂದ ಹೊರಟ್ಟಿದ್ದರು. ರವಿವಾರ ಬೆಳ್ಳಂಬೆಳಗ್ಗೆ ಬೆಳಗ್ಗೆ 5ಗಂಟೆಗೆ ಕೂಳೂರು ಸೇತುವೆ ಮೇಲೆ ಮುಮ್ತಾಜ್ ಅವರ ಬಿಎಂಡಬ್ಲ್ಯು ಕಾರು ಪತ್ತೆಯಾಗಿದೆ. ಪುತ್ರಿಗೆ ಈ ವಿಚಾರ ತಿಳಿದು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅವರು ಸೇತುವೆಯಿಂದ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್, ಅಗ್ನಿಶಾಮಕದಳ ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದೆ. ಎಫ್ಎಸ್‌ಎಲ್ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಸ್ಥಳಕ್ಕೆ ಭೇಟಿ ನೀಡಿದ್ದಾರೆ‌. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಮ್ತಾಜ್ ಆಲಿಯವರು ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ತೊಡಗಿಸಿಕೊಂಡಿದ್ದರು.

Related posts

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ – ಸವಾರ ಮೃತ್ಯು, ಸಹಸವಾರ ಗಂಭೀರ

ಫಾಸ್ಟ್‌ಟ್ಯಾಗ್‌ ಹೊಸ ನಿಯಮ ಜಾರಿ: ಕಡಿಮೆ ಬ್ಯಾಲೆನ್ಸ್ ಇದ್ರೆ ದುಪ್ಪಟ್ಟು ದಂಡ.!