ಮಾಜಿ ಉಪಕುಲಪತಿ ಪದ್ಮವಿಭೂಷಣ ಡಾ. ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್ ನಿಧನ

ಮಣಿಪಾಲ : ವಿಶ್ರಾಂತ ಉಪಕುಲಪತಿ, ಖ್ಯಾತ ಹೃದಯ ಶಸ್ತ್ರಚಿಕಿತ್ಸಕ, ಶಿಕ್ಷಣ ತಜ್ಞ ಪ್ರೊ. ಪದ್ಮವಿಭೂಷಣ ಡಾ. ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್ ಮಣಿಪಾಲದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

ಪ್ರೊಫೆಸರ್ ವಲಿಯಾಥನ್ ಅವರು ಹೃದಯ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ತಂತ್ರಜ್ಞಾನಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ.

ಪ್ರೊಫೆಸರ್ ವಲಿಯಾಥನ್ ಅವರು 1993 ರಿಂದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ಯ ಮೊದಲ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ್ದರು.

ಪ್ರೊಫೆಸರ್ ವಲಿಯಾಥನ್ ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿ, ಪುರಸ್ಕಾರಕ್ಕೆ ಭಾಜನರಾದರು. ಪದ್ಮವಿಭೂಷಣ (2005), ಪದ್ಮಶ್ರೀ (2002), ಡಾ. ಬಿ. ಸಿ. ರಾಯ್ ರಾಷ್ಟ್ರೀಯ ಪ್ರಶಸ್ತಿ, ಇಂಗ್ಲೆಂಡ್‌ನ ರಾಯಲ್ ಕಾಲೇಜ್ ಆಫ್ ಸರ್ಜನ್ಸ್‌ನ ಹಂಟೇರಿಯನ್ ಪ್ರೊಫೆಸರ್‌ಶಿಪ್, ಫ್ರೆಂಚ್ ಸರ್ಕಾರದಿಂದ ಚೆವಲಿಯರ್ ಆಫ್ ದಿ ಆರ್ಡರ್ ಆಫ್ ಪಾಮ್ಸ್ ಅಕಾಡೆಮಿಕ್ಸ್ ಸಹಿತ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ