ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ

ಉಡುಪಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿಯಲ್ಲಿ ರಾಜ್ಯ ಸಂಸ್ಥೆಯ ಸೂಚನೆಯಂತೆ ಗುರುವಾರದಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವಜ್ರ ಮಹೋತ್ಸವದ ಪ್ರಾರಂಭದ ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನವನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಚರಿಸಲಾಯಿತು.

ಸ್ಕೌಟ್ಸ್ ಗೈಡ್ಸ್ ನಿಧಿಗೆ ದೇಣಿಗೆ ನೀಡುವ ಮೂಲಕ ಜಿಲ್ಲಾಧಿಕಾರಿ ಕಾರ್ಯಕ್ರಮ ಉದ್ಘಾಟಿಸಿದರು. ವಿವಿಧ ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ದೇಣಿಗೆಯನ್ನು ಸಂಗ್ರಹಿಸಲಾಯಿತು. ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ್ ಶೆಟ್ಟಿ, ಜಿಲ್ಲಾ ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು, ಜಿಲ್ಲಾ ಕಾರ್ಯದರ್ಶಿ ಆನಂದ್ ಅಡಿಗ, ಜಿಲ್ಲಾ ಖಜಾಂಚಿ ಹರಿ ಪ್ರಸಾದ್ ರೈ, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶೇಖರ್ ಪೂಜಾರಿ, ದಳ ನಾಯಕಿಯರು, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್ ಬನ್ನಿ ಕಬ್, ಬುಲ್ ಬುಲ್ ಸ್ಕೌಟ್ಸ್, ಗೈಡ್ಸ್ , ರೋವರ್, ರೇಂಜರ್ಸ್, ಇವರೆಲ್ಲರ ಸಮ್ಮುಖದಲ್ಲಿ ಧ್ವಜ ಚೀಟಿಯನ್ನು ಬಿಡುಗಡೆ ಮಾಡಲಾಯಿತು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !