ಮಲ್ಪೆ : ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದ ಮಹಿಳೆಯನ್ನು ಮರಕ್ಕೆ ಕಟ್ಟಿ ಧರ್ಮದೇಟು ನೀಡಿದ ನಾಲ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯನಗರ ಜಿಲ್ಲೆಯ ಮಹಿಳೆ ಬಂದರಿನಲ್ಲಿ ಬೋಟ್‌ನಿಂದ ಮೀನು ಕದ್ದಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಲಕ್ಷ್ಮೀ ಬಾಯಿ ಮತ್ತಿತರರು ಆಕೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ್ದರು. ಈ ಸಂಬಂಧ ಹಲ್ಲೆಗೊಳಗಾದ ಮಹಿಳೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಥಳಿಸುವ ವೈರಲ್ ವಿಡಿಯೋ ಆಧರಿಸಿ ಲಕ್ಷ್ಮೀ ಬಾಯಿ ಮತ್ತು ಮೂವರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ವಿಡಿಯೋದಲ್ಲಿರುವ ಉಳಿದ ಆರೋಪಿಗಳ ಬಗ್ಗೆ ಪರಿಶೀಲನೆ ನಡೆಸುತ್ತಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಎಸ್ಪಿ ಡಾ.ಅರುಣ್ ಕೆ.ಮಾಹಿತಿ ನೀಡಿದ್ದಾರೆ.
ಮೀನು ಕದ್ದ ಆರೋಪದಲ್ಲಿ ಮಹಿಳೆಗೆ ಥಳಿಸುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.