ನಾಲ್ಕು ತಿಂಗಳ ಹೆಣ್ಣು ಮಗುವನ್ನು ರಸ್ತೆ‌ ಬದಿ ಬಿಟ್ಟು ಹೋದ ಕಟುಕರು

ಬೆಳ್ತಂಗಡಿ : ಯಾರೋ ಅಪರಿಚಿತರು ರಸ್ತೆ‌ ಬದಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋಗಿರುವ ಘಟನೆ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ರೋಟ್ಟು ರಸ್ತೆಯಲ್ಲಿ ನಡೆದಿದೆ.

ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ರೋಟ್ಟು ರಸ್ತೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗು ಸಾರ್ವಜನಿಕರ ಕಣ್ಣಿಗೆ ಬಿದ್ದಿದ್ದು, ಸಾರ್ವಜನಿಕರು ರಕ್ಷಿಸಿ ಆರೈಕೆ ಮಾಡಿ ಧರ್ಮಸ್ಥಳ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪೋಷಕರ ಪತ್ತೆಗೆ ಬಲೆ ಬೀಸಿದ್ದಾರೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ