ಶರಣಾದ ನಾಲ್ವರು ನಕ್ಸಲರು ಕಾರ್ಕಳ ನ್ಯಾಯಾಲಯಕ್ಕೆ ಹಾಜರು

ಕಾರ್ಕಳ : ನಕ್ಸಲ್ ಶರಣಾಗತಿ ವಿಚಾರವಾಗಿ ತನಿಖಾ ಪ್ರಕ್ರಿಯೆ ಮುಂದುವರೆದಿದ್ದು ಇವತ್ತು ನಾಲ್ವರು ನಕ್ಸಲರು ಕಾರ್ಕಳ ನ್ಯಾಯಾಲಯದ ಮುಂದೆ ಹಾಜರಾದರು.

ಕಾರ್ಕಳ ಮತ್ತು ಹೆಬ್ರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 15 ಪ್ರಕರಣಗಳ ಬಗ್ಗೆ ಪೊಲೀಸ್‌ ತನಿಖೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಜಯಣ್ಣ, ಮುಂಡಗಾರು ಲತಾ, ವನಜಾಕ್ಷಿ ಮತ್ತು ಸುಂದರಿ ಅವರನ್ನು ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದರು.

ಶರಣಾದ 6 ಮಂದಿಯ ಪೈಕಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ