ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ನೂತನ ಅಧ್ಯಕ್ಷರಾಗಿ ಫ್ರ್ಯಾಂಕೀ ಡಿಸೋಜಾ ಕೊಳಲಗಿರಿ ಆಯ್ಕೆ; ಗೌರವಾಧ್ಯಕ್ಷರಾಗಿ ಕೃಷ್ಣಕುಮಾರ್ ಆಯ್ಕೆ

ತುಳುನಾಡ ರಕ್ಷಣಾ ವೇದಿಕೆಯ ಕೇಂದ್ರೀಯ ಕಚೇರಿಯಲ್ಲಿ ನಡೆದ ಕೇಂದ್ರೀಯ ಪ್ರಮುಖರ ಸಭೆಯಲ್ಲಿ ಈ ಕೂಡಲೇ ಜಾರಿಗೆ ಬರುವಂತೆ ತುರವೇ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಫ್ರ್ಯಾಂಕೀ ಡಿಸೋಜಾ ಕೊಳಲಗಿರಿ‌ರವರನ್ನು ಮತ್ತು ಉಡುಪಿ ಜಿಲ್ಲಾ ಗೌರವ ಅಧ್ಯಕ್ಷರಾಗಿ ಕೃಷ್ಣಕುಮಾರ್‌ರವರನ್ನು ನೇಮಕ ಮಾಡಲಾಗಿದೆ.

ಕೇಂದ್ರೀಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು‌ರವರು ನೂತನ ಅಧ್ಯಕ್ಷರಿಗೆ ಹಾಗೂ ಗೌರವಾಧ್ಯಕ್ಷರಿಗೆ ನೇಮಕಾತಿ ಪತ್ರ ನೀಡಿದರು.

ಉಡುಪಿ ಜಿಲ್ಲಾ ಹಿರಿಯ ಉಪಾಧ್ಯಕ್ಷ ಜಯರಾಮ್ ಪೂಜಾರಿ ಉಪಸ್ಥಿತರಿದ್ದರು ಎಂದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಕಚೇರಿ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ