ಪಳ್ಳಿಯಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ, ಚರ್ಮರೋಗ ತಪಾಸಣೆ ಹಾಗೂ ಮಧುಮೇಹ ರಕ್ತದೊತ್ತಡ ಶಿಬಿರ

ಕಾರ್ಕಳ : ಜಿಲ್ಲಾ ಪಂಚಾಯತ್ ಉಡುಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಟರೋಗ ನಿವಾರಣಾ ಕಚೇರಿ, ಕೆ.ಎಂ.ಸಿ ಆಸ್ಪತ್ರೆ ಮಣಿಪಾಲ, ಪ್ರಾಥಮಿಕ ಆರೋಗ್ಯ ಕೇಂದ್ರ ಪಳ್ಳಿ, ಗ್ರಾಮ ಪಂಚಾಯತ್ ಪಳ್ಳಿ, ಶ್ರೀ ಮಹಾಕಾಳಿ ಭಜನಾ ಮಂಡಳಿ ಮಂಗಲ್ದಿ ಮಠ ಪಳ್ಳಿ. ಇವರ ಸಹಯೋಗದೊಂದಿಗೆ ಸೆ. 17 ಮಂಗಳವಾರ ಪಳ್ಳಿ ಅಂಬೇಡ್ಕರ್ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ, ಚರ್ಮರೋಗ ತಪಾಸಣೆ ಹಾಗೂ ಮಧುಮೇಹ ರಕ್ತದೊತ್ತಡ ಶಿಬಿರ ನಡೆಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಸದಸ್ಯರು ಹಾಗೂ ವೈದ್ಯರು ಹಾಗೂ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಶಿಬಿರವನ್ನು ಉದ್ಘಾಟಿಸಲಾಯಿತು. ಸುಮಾರು 70 ಕ್ಕೂ ಅಧಿಕ ಸಾರ್ವಜನಿಕರು ಶಿಬಿರದಲ್ಲಿ ಪಾಲ್ಗೊಂಡರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ