ಆದರ್ಶ ಆಸ್ಪತ್ರೆಯಲ್ಲಿ ಫ್ಯಾಟಿ ಲಿವರ್ ದಿನದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ

ಉಡುಪಿ : ನಗರದ ಆದರ್ಶ ಆಸ್ಪತ್ರೆಯಲ್ಲಿ ಫ್ಯಾಟಿ ಲಿವರ್ ದಿನದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆಯನ್ನು ಆಯೋಜಿಸಲಾಗಿತ್ತು.

ತಪಾಸಣಾ ಶಿಬಿರವನ್ನು ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವಿಮಲ ಚಂದ್ರಶೇಖರ್ ಹಾಗೂ ಆದರ್ಶ ಆಸ್ಪತ್ರೆಯ ಯಕೃತ್ತು ಹಾಗೂ ಕರಳು ಸಂಬಂಧಿ ರೋಗಗಳ ತಜ್ಞರಾದ ಡಾ. ಸತೀಶ್ ಕೆ. ನಾಯಕ್ ಹಾಗೂ ಸ್ತ್ರೀರೋಗ ತಜ್ಞರಾದ ಡಾ. ರಂಜಿತಾ ಎಸ್. ನಾಯಕ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಸತೀಶ್ ಕೆ. ನಾಯಕ್, ಲಿವರ್‌ನ ಮಹತ್ವ, ಫ್ಯಾಟಿ ಲಿವರ್‌ನಿಂದ ಆಗುವ ದುಷ್ಪರಿಣಾಮಗಳು, ಹಾಗೂ ಆಹಾರ ಪದ್ದತಿ, ವ್ಯಾಯಾಮದ ಮಹತ್ವವನ್ನು ತಿಳಿಸಿದರು.

ಡಯಟಿಷನ್ ಅನುಶ್ರೀ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ