ಮಧ್ವನಗರದಲ್ಲಿ ಉಚಿತ ನೇತ್ರ ತಪಾಸಣೆ, ನೇತ್ರ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಮಸೂರ ಅಳವಡಿಕೆ ಶಿಬಿರ

ಉಡುಪಿ : ಯುವನಿಧಿ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಮೂಡುಬೆಟ್ಟು ಇದರ ವತಿಯಿಂದ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಜಿಲ್ಲಾ ಆರೋಗ್ಯ ಮತ್ತು‌ ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ಅಂಧತ್ವ ನಿವಾರಣಾ ವಿಭಾಗ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ‘ಉಚಿತ ನೇತ್ರ ತಪಾಸಣೆ, ನೇತ್ರ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಮಸೂರ (ಐಒಎಲ್) ಅಳವಡಿಕೆ ಶಿಬಿರ’ವು ಮಧ್ವನಗರದ ಜವಣೆರ ಕಟ್ಟೆಯ ಏಕತಾ ರಂಗಮಂಟಪದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ನಗರಸಭೆ ಸದಸ್ಯರಾದ ಶ್ರೀಶ ಕೊಡವೂರು, ಮಧ್ವನಗರ ಸಾರ್ವಜನಿಕ ಗಣೇಶೋತ್ಸವ ಅಧ್ಯಕ್ಷ ಮನೋಜ್ ಕೋಟ್ಯಾನ್, ಮೂಡುಬೆಟ್ಟು ಯುವನಿಧಿ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಗೌರವಾಧ್ಯಕ್ಷ ಪ್ರಶಾಂತ್ ಶೆಟ್ಟಿ, ಅಧ್ಯಕ್ಷ ಕಿಶೋರ್ ಕುಮಾರ್ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು. ನೂರಾರು ಮಂದಿ ಶಿಬಿರದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಂಡರು.

Related posts

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ – ಸವಾರ ಮೃತ್ಯು, ಸಹಸವಾರ ಗಂಭೀರ

ಸಚಿವ ಜಾರಕಿಹೊಳಿ ಅವರಿಂದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ