ಪಳ್ಳಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ವತಿಯಿಂದ ಉಚಿತ ಯಕ್ಷಗಾನ ತರಬೇತಿ

ಕಾರ್ಕಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಪಳ್ಳಿ-ನಿಂಜೂರು ಘಟಕದ ವತಿಯಿಂದ ಪಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ತರಬೇತಿ ನಡೆಯಲಿದೆ.

ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಜೂ.19 ರಂದು ಪೂರ್ವಾಹ್ನ 10.30ಕ್ಕೆ ಬಹುಮೇಳಗಳ ಸಂಚಾಲಕ ಕಿಶನ್‌ ಹೆಗ್ಡೆ ನೆರವೇರಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪಟ್ಲ ಫೌಂಡೇಶನ್‌ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್‌ ಶೆಟ್ಟಿ, ಪಳ್ಳಿ ನಿಂಜೂರು ಘಟಕದ ಗೌರವಾಧ್ಯಕ್ಷ ಭರತ್ ಹೆಗ್ಡೆ, ನವೀನ್‌ ಶೆಟ್ಟಿ ನಿಂಜೂರು ಕೆರೆಮಜಲು, ಪ್ರಧಾನ ಕಾರ್ಯದರ್ಶಿ ಗಣಪತಿ ಭಟ್, ಸಂಚಾಲಕ ಸುನಿಲ್ ಕೋಟ್ಯಾನ್, ಪ್ರಧಾನ ಸಂಘಟನಾ ಕಾರ್ಯದರ್ಶಿ ರಂಜಿತ್ ಶೆಟ್ಟಿ ಕೌಡೂರು, ಕೋಶಾಧಿಕಾರಿ ನಿಧಿಶ್ ಆಚಾರ್ಯ, ಸದಸ್ಯ ರಮಾನಾಥ ಕಿಣಿ, ಎಸ್‌ಡಿಎಂಸಿ ಅಧ್ಯಕ್ಷ ಪ್ರಭಾಕರ ಬಂಗೇರ ಪಳ್ಳಿ, ಶಾಲಾ ಮುಖ್ಯ ಶಿಕ್ಷಕಿ ನಾಗರತ್ನ ಮತ್ತು ಹಳೇ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿರುವರು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ಪಳ್ಳಿ ನಿಂಜೂರು ಘಟಕದ ಅಧ್ಯಕ್ಷ ಸುನಿಲ್ ಬಿ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ