ಗಾಂಧಿ ಜಯಂತಿ – ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾದ ಜಿಲ್ಲಾಧಿಕಾರಿ

ಉಡುಪಿ : ಗಾಂಧಿ ಜಯಂತಿ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಉಡುಪಿ ನಗರಸಭೆ, ವಿವಿಧ ಇಲಾಖೆ ಹಾಗೂ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಹಳೆ ಕೆ.ಎಸ್.ಆ‌ರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಬಸ್‌ ನಿಲ್ದಾಣದಲ್ಲಿ ಪೊರಕೆ ಹಿಡಿದು ಸ್ವಚ್ಛತಾ ಕಾರ್ಯ‌ವನ್ನು ಕೈಗೊಳ್ಳುವ ಮೂಲಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸೇರಿದ ಅತಿಥಿಗಳು, ಗಣ್ಯರು ಹಾಗೂ ವಿದ್ಯಾರ್ಥಿಗಳು ಪರಿಸರದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು. ಬಳಿಕ ಅಜ್ಜರಕಾಡಿನ ಭುಜಂಗ ಪಾರ್ಕ್ ಸುತ್ತಮುತ್ತ ಸ್ವಚ್ಛತಾ ಕಾರ್ಯ ನಡೆದವು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಪೌರಾಯುಕ್ತ ರಾಯಪ್ಪ, ವಿವಿಧ ಸಂಘ-ಸಂಸ್ಥೆಗಳ ಸದಸ್ಯರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್‌ನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ