ಗಂಗೊಳ್ಳಿ ಜಾನುವಾರು ಕಳ್ಳತನ ಆರೋಪಿಗಳು ಪೊಲೀಸ್ ವಶಕ್ಕೆ

ಉಡುಪಿ : ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಹತ್ತಿರ ನಡೆದ ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಗುಲ್ವಾಡಿ ಎಂಬಲ್ಲಿ ಪ್ರಕರಣದ ಆರೋಪಿ ಮೊಹಮ್ಮದ್‌ ಸೀನಾನ್‌ (19) ಹಾಗೂ ಇನ್ನೊರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆದು ದಸ್ತಗಿರಿ ಮಾಡಲಾಗಿದೆ.

ಗಂಗೊಳ್ಳಿ ಪೊಲೀಸ್ ಠಾಣಾ ಪಿ‌ಎಸ್‌ಐ‌ರವರಾದ ಹರೀಶ್ ಮತ್ತು ಬಸವರಾಜ ಕನಶೆಟ್ಟಿ ಹಾಗೂ ಸಿಬ್ಬಂದಿಗಳಾದ ರಾಜು, ಶಾಂತರಾಮ ಹಾಗೂ ರಾಘವೇಂದ್ರರವರು ಆರೋಪಿಗಳನ್ನು ವಿಚಾರಿಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದು, ಆರೋಪಿಯು ಕೃತ್ಯಕ್ಕೆ ಬಳಸಿದ ಮಾರುತಿ ಸುಜುಕಿ ರಿಡ್ಜ್‌ ಕಾರನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ

ರಕ್ಷಿಸಲ್ಪಟ್ಟ 3 ಜಾನುವಾರಗಳನ್ನು ನೆಂಚಾರು ಗೋಶಾಲೆಗೆ ಬಿಡಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ