ನಾಪತ್ತೆಯಾಗಿರುವ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸಲು ಗಂಟಿಹೊಳೆ ಆಗ್ರಹ

ಉಡುಪಿ : ಮೀನುಗಾರಿಕೆ ವೇಳೆ ನಾಪತ್ತೆಯಾಗಿರುವ ನಾರಾಯಣ ಮೊಗವೀರ ಇವರ ಕುಟುಂಬಕ್ಕೆ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಡಿ ಮಂಜೂರಾದ ಪರಿಹಾರ ಮೊತ್ತವನ್ನು ಇನ್ನೆರಡು ದಿನದಲ್ಲಿ ನೀಡಿ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಆಗ್ರಹಿಸಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಉಪಸ್ಥಿತಿಯಲ್ಲಿ ಮೀನುಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಕ್ಷೇತ್ರದ ಮೀನುಗಾರಿಕೆ ಯೋಜನೆಗಳು ಹಾಗೂ ಮೀನುಗಾರರ ಸಮಸ್ಯೆಗಳ ಕುರಿತು ಚರ್ಚಿಸಿದ ಶಾಸಕರು ಜಿಲ್ಲಾಡಳಿತದ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲಾ ಪಂಚಾಯತ್‌ನಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಉಪಸ್ಥಿತಿಯಲ್ಲಿ ಮೀನುಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಕ್ಷೇತ್ರದ ಮೀನುಗಾರಿಕೆ ಯೋಜನೆ ಹಾಗೂ ಮೀನುಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಶಾಸಕರು ಜನವರಿ 2ರಂದು ಪರ್ಸಿನ್ ಬೋಟ್‌ನಲ್ಲಿ ಮೀನುಗಾರಿಕೆ ವೇಳೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ನಾಪತ್ತೆ ಆಗಿರುವ ಬಡ ಮೀನುಗಾರ ನಾರಾಯಣ ಮೊಗವೀರ ಇವರ ಸುಳಿವು ಸಿಗದೇ ಇರುವುದು ಅತ್ಯಂತ ದುಃಖದಾಯಕ ಸಂಗತಿ. ನಾರಾಯಣ ಮೊಗವೀರರ ಮನೆಗೆ ತೆರಳಿ ಅವರ ಕುಟುಂಬದ ದುಃಖದಲ್ಲಿ ಭಾಗಿಯಾಗಿರುತ್ತೇನೆ. ನಾಪತ್ತೆಯಾಗಿರುವ ಅವರನ್ನು ಹುಡುಕಲು ಜಿಲ್ಲಾಡಳಿತಕ್ಕೆ ಹಾಗೂ ಸಂಬಂದಿಸಿದ ಇಲಾಖೆಗೆ ಈಗಾಗಲೇ ಮನವಿ ಮಾಡಲಾಗಿದೆ. ಆದರೂ ಈವರೆಗೂ ಮೀನುಗಾರರನ್ನು ಹುಡುಕಲು ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ಸಾಧ್ಯವಾಗದೆ ಇರುವುದು ಹಾಗೂ ಈ ಬಗ್ಗೆ ಅಗತ್ಯ ಮುತುವರ್ಜಿ ವಹಿಸದೇ ಇರುವುದು ಖಂಡನೀಯ. ಬಡ ಮೀನುಗಾರರ ನೋವಿಗೆ ಸ್ಪಂದಿಸುವ ಜಿಲ್ಲಾಡಳಿತ ಈ ಬಗ್ಗೆ ದಿವ್ಯ ನಿರ್ಲಕ್ಷ ತೋರಿದೆ ಎಂದು ಜಿಲ್ಲಾಡಳಿತದ ಕಾರ್ಯವೈಖರಿಯ ವಿರುದ್ಧ ಕಿಡಿ ಕಾರಿದರು.

ಮೀನುಗಾರರ ಸಂಕಷ್ಟ ಸಮಯದಲ್ಲಿಯೇ ಬಳಕೆಯಾಗುವ ಸಂಕಷ್ಟ ಪರಿಹಾರ ನಿಧಿಯಡಿ 10 ಲಕ್ಷ ತುರ್ತು ಪರಿಹಾರ ನೀಡಲು ಜನವರಿ 10‌ರಂದು ಆದೇಶ ಪತ್ರ ಹೊರಡಿಸಿ 7 ದಿನ ಕಳೆದರೂ ಈವರೆಗೂ ನೊಂದವರ ಮನೆ ಬಾಗಿಲಿಗೆ ತೆರಳಿ ಚೆಕ್ ವಿತರಿಸುವ ಹಾಗೂ ನಿಮ್ಮ ಸಂಕಷ್ಟದಲ್ಲಿ ನಾವು ಭಾಗಿಯಾಗಿದ್ದೇವೆ ಎಂದು ಹೇಳಲು ಜಿಲ್ಲಾಡಳಿತಕ್ಕೆ ಸಾಧ್ಯವಾಗಿಲ್ಲ, ಇನ್ನೆರಡು ದಿನದಲ್ಲಿ ಮೀನುಗಾರರ ಕುಟುಂಬಕ್ಕೆ ಪರಿಹಾರ ಮೊತ್ತದ ಚೆಕ್ ನೀಡಬೇಕು. ಆ ಮೂಲಕ ಮನೆಯ ಯಜಮಾನನನ್ನು ಕಳೆದುಕೊಂಡು ನೋವಿನಲ್ಲಿರುವ ಕುಟುಂಬಕ್ಕೆ ಜಿಲ್ಲಾಡಳಿತ ಹಾಗೂ ಸರಕಾರ ನೆರವು ನೀಡಬೇಕು. ಇದು ಆಗದೇ ಇದ್ದಲ್ಲಿ ಪ್ರತಿಭಟಿಸಿಯಾದರೂ ಆ ಕುಟುಂಬಕ್ಕೆ ನ್ಯಾಯ ಒದಗಿಸಲು ಸಿದ್ದನಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !