ಗೀತೋತ್ಸವದ ಮಂಗಳೋತ್ಸವ; ನಟ, ನಿರ್ದೇಶಕ ಉಪೇಂದ್ರ ಸಹಿತ ಗಣ್ಯರು ಭಾಗಿ

ಉಡುಪಿ : ಬೃಹತ್‌ ಗೀತೋತ್ಸವದ ಮಂಗಳೋತ್ಸವು ಕೃಷ್ಣಮಠದ ರಾಜಾಗಣದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಸಂಪನ್ನಗೊಂಡಿತು.

ಗೀತಾ ಜ್ಞಾನ ದೀಪೋತ್ಸವದ ಜತೆಗೆ ಶ್ರೀಪಾದರು ಶ್ರೀ ಕೃಷ್ಣನಿಗೆ ಸಮರ್ಪಿಸಿದ ಪಾರ್ಥಸಾರಥಿ ಸುವರ್ಣ ರಥದ ಮಾದರಿಯ ಗೀತಾ ರಥವನ್ನು ರಾಜಾಂಗಣದ ಪರಿಸರದಲ್ಲಿ ಎಳೆಯುವ ಮೂಲಕ ವಿಶಿಷ್ಟವಾಗಿ ಮಂಗಳೋತ್ಸವ ಆಚರಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ದಿನೇಶ್‌, ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಿರಣ್‌ ಎಸ್‌. ಗಂಗಣ್ಣವರ್‌, ನಟ ಉಪೇಂದ್ರ, ಶಾಸಕರಾದ ಯಶ್‌ಪಾಲ್‌ ಎ. ಸುವರ್ಣ, ಉದ್ಯಮಿಗಳಾದ ಮನೋಹರ್‌ ಶೆಟ್ಟಿ, ಪುರುಷೋತ್ತಮ ಶೆಟ್ಟಿ ಸೇರಿ ಗಣ್ಯರು ಪಾಲ್ಗೊಂಡಿದ್ದರು.

ಪುತ್ತಿಗೆ ಶ್ರೀಪಾದರು 2025ರ ವಿಶ್ವಾವಸು ನಾಮ ಸಂವತ್ಸರದ ಶ್ರೀ ಪುತ್ತಿಗೆ ಮಠ ಪರ್ಯಾಯ ಪಂಚಾಂಗ ಬಿಡುಗಡೆ ಮಾಡಿದರು. ಬಳಿಕ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಜನವರಿ 29ರಂದು ಪುರಂದರ ದಾಸರ ಆರಾಧನೆಯ ಪ್ರಯುಕ್ತ ರಾಜಾಂಗಣದಲ್ಲಿ ‘ಸಹಸ್ರ ಕಂಠ ಗಾಯನ’; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿ ಸಭೆ

ಯುವಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಫೆಬ್ರವರಿ ಮೊದಲ ವಾರದಲ್ಲಿ ಬೃಹತ್‌ ಉದ್ಯೋಗ ಮೇಳ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಗಂಗೊಳ್ಳಿ ಪಂಚಾಯತ್‌ನಲ್ಲಿ ಮುಸ್ಲಿಂ ಮೌಲ್ವಿಯ ಪ್ರಾರ್ಥನೆಗೆ ಆಕ್ಷೇಪ; ಶಾಸಕರ ನೇತೃತ್ವದಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆ