ಲೋಕಸಭೆ ಫಲಿತಾಂಶ ಬೆನ್ನಲ್ಲೇ ಉಡುಪಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗೋ ಬ್ಯಾಕ್ ಅಭಿಯಾನದ ಬಿಸಿ!

ಉಡುಪಿ : ಕರಾವಳಿಯಲ್ಲಿ ಕಾಂಗ್ರೆಸ್‌ ಸೋಲಿನ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿಗಳ ವಿರುದ್ಧ ಗರಂ ಆಗಿರುವ ಕಾಂಗ್ರೆಸ್‌ ಕಾರ್ಯಕರ್ತರು, ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ʼಗೋ ಬ್ಯಾಕ್ʼ‌ ಅಭಿಯಾನ ಕೈಗೊಂಡಿದ್ದಾರೆ. ಈ ಸಂಬಂಧ
ಸಾಮಾಜಿಕ ಜಾಲತಾಣದಲ್ಲಿ ‘ಗೋ ಬ್ಯಾಕ್‌ʼ ಅಭಿಯಾನದ ಸದ್ದು ಜೋರಾಗಿದೆ. ಮುಖ್ಯವಾಗಿ ಉಡುಪಿಯ ಕೈ ಕಾರ್ಯಕರ್ತರು
ಉಡುಪಿ ಜಿಲ್ಲಾ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಗರಂ ಆಗಲು ಇನ್ನೊಂದು ಕಾರಣ ಅವರು ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡಿದ್ದು. ಚುನಾವಣೆ ಘೋಷಣೆ ಆದಾಗಿನಿಂದ ಹೆಬ್ಬಾಳ್ಕರ್ ಜಿಲ್ಲೆಗೇ ಕಾಲಿಟ್ಟಿರಲಿಲ್ಲ‌. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಎರಡೂವರೆ ಲಕ್ಷ ಮತಗಳ ಅಂತರದಿಂದ ಸೋತಿದ್ದಾರೆ. ಈ ಎಲ್ಲ ಸಿಟ್ಟನ್ನು ಕೈ ಕಾರ್ಯಕರ್ತರು ಗೋ ಬ್ಯಾಕ್ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಹೊರ ಹಾಕಿದ್ದಾರೆ. ಮಾತ್ರವಲ್ಲ, ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸುವಂತೆಯೂ ಒತ್ತಾಯ ಮಾಡಿದ್ದಾರೆ.

Related posts

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಮಲ್ಪೆ ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಪೊಲೀಸ್ ವಶಕ್ಕೆ

ಕಡಿದು ಬಿಸಾಡಿದ ಬಾಳೆ ದಿಂಡಿನಲ್ಲಿ ಚಿಗುರುಡೆದ ಬಾಳೆಗೊನೆ