ಥಾಯ್ಲೆಂಡ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಧನ್ವಿ ಪೂಜಾರಿಗೆ ಚಿನ್ನದ ಪದಕ

ಉಡುಪಿ : ಥಾಯ್ಲೆಂಡ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಯೋಗ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧನ್ವಿ ಪೂಜಾರಿ ಮರವಂತೆ ಭಾರತದಿಂದ ಪ್ರತಿನಿಧಿಸಿ ಚಿನ್ನದ ಪದಕ ಗಳಿಸಿದ್ದಾಳೆ.

ವರ್ಷಿಣಿ ಯೋಗ ಎಜ್ಯುಕೇಶನ್ ಆಂಡ್ ಕಲ್ಚರಲ್ ಸ್ಪೋರ್ಟ್ಸ್ ಟ್ರಸ್ಟ್ ಶಿವಮೊಗ್ಗ ಇವರ ವತಿಯಿಂದ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸಾಧನೆಗಾಗಿ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ