ಟಯರ್ ಬ್ಲಾಸ್ಟ್ ಆಗಿ ಗೂಡ್ಸ್ ವಾಹನ ಪಲ್ಟಿ : ಮೂವರಿಗೆ ಗಾಯ – ಹೆದ್ದಾರಿ ಸಂಚಾರ ಅಸ್ತವ್ಯಸ್ತ

ಪಡುಬಿದ್ರಿ : ಗೂಡ್ಸ್ ವಾಹನವೊಂದು ಟಯರ್ ಬ್ಲಾಸ್ಟ್ ಆದ ಪರಿಣಾಮ ಪಲ್ಟಿಯಾಗಿದ್ದು, ಅದರಲ್ಲಿದ್ದ ಮೂರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿ, ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಆದ ಘಟನೆ ಸಂಭವಿಸಿದೆ.

ಕಾವೂರಿನಿಂದ ಕಟಪಾಡಿಗೆ ಸೆಂಟ್ರಿಗ್ ಪರಿಕರಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನದ ಹಳೆ ಟಯರ್ ಬ್ಲಾಸ್ಟ್ ಆಗಿ ಎರ್ಮಾಳು ಬುದ್ದಗಿ ಪೆಟ್ರೋಲ್ ಬಂಕ್ ಬಳಿ ಹೆದ್ದಾರಿಗೆ ಉರುಳಿ ಬಿದ್ದಿದೆ. ಆ ಸಂದರ್ಭ ಹೆದ್ದಾರಿಯಲ್ಲಿ ಯಾವುದೇ ವಾಹನ ಸಂಚಾರ ಇಲ್ಲದ ಕಾರಣ ನಡೆಯಲಿದ್ದ ಭಾರೀ ದುರಂತ ತಪ್ಪಿದಂತಾಗಿದೆ.

ಘಟನೆಯಿಂದ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು ಸಂಚಾರಿ ಪೊಲೀಸರು ಸುಗಮಗೊಳಿಸಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ