ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲ – ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ : ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಉಡುಪಿಯಲ್ಲಿ ಮಾತನಾಡಿ, ರೇಣುಕಾ ಸ್ವಾಮಿ ಕೊಲೆ ಪ್ರಕರಣವು ಕಾಂಗ್ರೆಸ್ ಪಕ್ಷದ ಪರವಾಗಿದ್ದರೆ ಏನು ಕೂಡ ಮಾಡಬಹುದು ಅನ್ನುವ ಧೈರ್ಯದಿಂದ ಈ ಕೃತ್ಯವಾಗಿದೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಸರಕಾರವನ್ನು ತೀವ್ರವಾಗಿ ಟೀಕಿಸಿದ ಅವರು, ಅಭಿವೃದ್ಧಿ ಮಾಡುವುದರಲ್ಲಿ ಮತ್ತು ಆಡಳಿತ ನಡೆಸುವುದರಲ್ಲಿ ಸಂಪೂರ್ಣ ಸೋತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಹೆಣ್ಣು ಮಕ್ಕಳ ಕಗ್ಗೊಲೆಯಾಗುತ್ತಿದೆ, ಚಾಕು ಚೂರಿಗಳ ಮೇಲಾಟದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಅವರು ದುರನಿಂದಿಸಿದ್ದಾರೆ. “ಸಮಾಜ ವಿರೋಧಿ ಮತ್ತು ರಾಷ್ಟ್ರ ವಿರೋಧಿ ಶಕ್ತಿಗಳಿಗೆ ಮಂಗಳೂರು ಘಟನೆ ನಿದರ್ಶನವಾಗಿದೆ,” ಎಂದು ಅವರು ಹೇಳಿದರು.

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ. ಇದರಿಂದ ಸಾಮಾನ್ಯ ಜನರ ಬದುಕು ಧಾರುಣವಾಗಿದೆ. ರಾಷ್ಟ್ರ ವಿರೋಧಿ ಶಕ್ತಿಗಳಿಗೆ ಕಾಂಗ್ರೆಸ್ ಸರ್ಕಾರ ಧೈರ್ಯ ನೀಡುತ್ತಿದೆ,” ಎಂದು ಮಧ್ವರಾಜ್ ಕಿಡಿಕಾರಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ