ಲೈಂಗಿಕ ಕಿರುಕುಳ ಆರೋಪ – ಬಂಧಿತರಾದ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗೆ ಮಧ್ಯಂತರ ಜಾಮೀನು

ಕುಂದಾಪುರ : ಲೈಂಗಿಕ ಕಿರುಕುಳದ ಆರೋಪದಡಿ ಬಂಧಿತರಾದ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ. ರಾಬರ್ಟ್ ರೆಬೆಲ್ಲೋಗೆ ಮಧ್ಯಂತರ ಜಾಮೀನು ನೀಡಿ ನ್ಯಾಯಾಲಯ ಆದೇಶಿಸಿದೆ. ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿರುವ ಡಾ. ರಾಬರ್ಟ್‌ ರೆಬೆಲ್ಲೋ, ತಮ್ಮ ಸಹದ್ಯೋಗಿಯೋರ್ವರ ಜೊತೆಗೆ ಅಸಭ್ಯ ವರ್ತನೆ ತೋರಿ ಲೈಂಗಿಕ ಶೋಷಣೆ ಎಸಗಿದ್ದಾಗಿ ಆರೋಪಿಸಲಾಗಿತ್ತು. ಈ ಸಂಬಂಧ ಸಹೋದ್ಯೋಗಿ ಮಹಿಳಾ ವೈದ್ಯೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆ ಮರೆಸಿಕೊಂಡಿದ್ದು, ನಂತರ ಪೊಲೀಸರು ಮುಂಬೈಯಲ್ಲಿ ಬಂಧಿಸಿದ್ದರು. ಬಂಧನದ ಬಳಿಕ ಆರೋಪಿ ವಕೀಲರ ಮೂಲಕ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದು ಅದನ್ನು ಪುರಸ್ಕರಿಸಿದ ನ್ಯಾಯಾಧೀಶರು ಮಧ್ಯಂತರ ಜಾಮೀನು ನೀಡಿ ಆದೇಶ ಮಾಡಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ