ಗೃಹಲಕ್ಷ್ಮಿ ಯೋಜನೆ; ಬಾಕಿ ಕಂತು ಇಂದಿನಿಂದಲೇ ಗೃಹಿಣಿಯರ ಖಾತೆಗೆ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಂಡ್ಯ : ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಬಾಕಿ ಕಂತು ಇಂದಿನಿಂದಲೇ (ಆ.6) ಗೃಹಿಣಿಯರ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮಂಡ್ಯ ನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಂತ್ರಿಕ ಕಾರಣದಿಂದ ಜೂನ್ ಮತ್ತು ಜುಲೈ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ. ಇವತ್ತಿನಿಂದ ಹಣ ಖಾತೆಗೆ ಜಮೆ ಆಗಲಿದೆ ಎಂದರು.

ಜನರಿಗೆ ನೀಡಲಾಗಿರುವ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಕೆಲವು ತಾಂತ್ರಿಕ ಕಾರಣದಿಂದ ಎರಡು ತಿಂಗಳ ಹಣ ಬಿಡುಗಡೆ ಆಗಿರಲಿಲ್ಲ. ಮಹಿಳೆಯರು ಇನ್ನು ಮುಂದೆ ಆತಂಕಪಡುವ ಅಗತ್ಯ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ