ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ 20 ಲಕ್ಷ ರೂಪಾಯಿ ಕಾಮಗಾರಿಯ ಗುದ್ದಲಿ ಪೂಜೆ

ಕಾಪು : ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀನಿವಾಸ ನಗರದ ರಸ್ತೆ ಅಭಿವೃದ್ಧಿ 10 ಲಕ್ಷ ರೂಪಾಯಿ ಹಾಗೂ ಹೊಳೆಪಡ್ಪು ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂಪಾಯಿ ಸೇರಿದಂತೆ ಒಟ್ಟು 20 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಉಪಾಧ್ಯಕ್ಷರಾದ ಇಂದಿರಾ ಕೆ ಹಾಗೂ ಕೊಡಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ