ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ನಿಧನ

ಬ್ರಹ್ಮಾವರ : ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ, ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ (76) ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

ಎಚ್. ಸುಬ್ಬಣ್ಣ ಭಟ್ ಮತ್ತು ಇಂದು ನಾಯಕ್ ಇವರ ಜೊತೆಯಲ್ಲಿ ಬಡಗುತಿಟ್ಟಿನ ವೇಷಭೂಷಣಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ಒದಗಿಸುತ್ತಾ, ಬಳಿಕ ಸ್ವಂತ ಸಂಸ್ಥೆಯನ್ನು ಸ್ಥಾಪಿಸಿದ ಇವರು ತಮ್ಮ ಸರಳ ಸಜ್ಜನಿಕೆಯಿಂದ ಎಲ್ಲ ಸಂಘ ಸಂಸ್ಥೆಗಳಿಗೂ ಅನಿವಾರ್ಯ ಎಂಬಂತೆ ಬೆಳೆದರು. ಬಡಗುತಿಟ್ಟಿನ ಕಿರೀಟ ಹಾಗೂ ವೇಷಭೂಷಣಗಳ ತಯಾರಿಕೆಯಲ್ಲಿ ಸಿದ್ಧಹಸ್ತರಾಗಿದ್ದರು

ಯಕ್ಷಶಿಕ್ಷಣ ಟ್ರಸ್ಟ್‌‌ನ ಅಧ್ಯಕ್ಷರೂ, ಉಡುಪಿಯ ಶಾಸಕರೂ ಆದ ಯಶಪಾಲ್ ಸುವರ್ಣ, ಸ್ಥಾಪಕ ಟ್ರಸ್ಟಿ ಕೆ.ರಘುಪತಿ ಭಟ್‌ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಬ್ರಹ್ಮಾವರದ ಅಜಪುರ ಯಕ್ಷಗಾನ ಮಂಡಳಿಯ ಅಧ್ಯಕ್ಷ ಪದ್ಮನಾಭ ಗಾಣಿಗ ಹಾಗೂ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ