ತ್ಯಾಜ್ಯ ಸಂಗ್ರಹಕ್ಕಾಗಿ ಜಿ.ಪಂಗೆ 6 ಎಲೆಕ್ಟ್ರಿಕ್ ಆಟೋ ರಿಕ್ಷಾಗಳ ಹಸ್ತಾಂತರ

ಉಡುಪಿ : ಉಡುಪಿಯ ಐಟಿ ಕಂಪನಿ ರೋಬೋಸೋಫ್ಟ್ ಟೆಕ್ನಾಲಜೀಸ್ ಇದರ ಸಿಎಸ್‌ಆರ್ ಕಾರ್ಯಕ್ರಮದಡಿಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್‌ಗೆ ತ್ಯಾಜ್ಯ ಸಂಗ್ರಹಕ್ಕಾಗಿ ಬಳಸಲು 6 ಎಲೆಕ್ಟ್ರಿಕ್ ಆಟೋ ರಿಕ್ಷಾಗಳನ್ನು ಟೆಕ್ನಾಲಜೀಸ್ ಕಂಪನಿಯ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.

ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರಿಗೆ ಈ ಎಲೆಕ್ಟ್ರಿಕ್ ಆಟೋ ರಿಕ್ಷಾಗಳನ್ನು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರವಿತೇಜ ಬೊಮ್ಮಿರೆಡ್ಡಿಪಲ್ಲಿ ವಿದ್ಯುಕ್ತವಾಗಿ ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ರೋಬೋ ಸೋಫ್ಟ್ ಸಂಸ್ಥೆ ಕೈಗೊಂಡಿರುವ ಹಲವಾರು ಸಾಮಾಜಿಕ ಕಾರ್ಯಕ್ರಮಗಳು ಶ್ಲಾಘನೀಯ. ಎಲೆಕ್ಟ್ರಿಕ್ ಆಟೋ ರಿಕ್ಷಾ ತ್ಯಾಜ್ಯ ನಿರ್ವಹಣೆ ಮತ್ತು ಪರಿಸರ ಸಂರಕ್ಷಣೆಗೆ ತುಂಬಾ ಸಹಕಾರಿಯಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಂಪನಿ ಮಾತೃ ಸಂಸ್ಥೆ ಟೆಕ್ನೋಪ್ರೊ ಜಪಾನ್‌‌ನ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !