ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್‌ಗೆ ದಾಖಲು

ಉಡುಪಿ : ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಉಡುಪಿಯ ಸಖಿ ಸೆಂಟರ್‌ಗೆ ದಾಖಲಿಸಿದ್ದಾರೆ.

ಕಾಪು ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿರುವ ಈ ಕುಟುಂಬದಲ್ಲಿ ಮಹಿಳೆಯ ಮಗ ಮಾನಸಿಕ ಅಸ್ವಸ್ಥಗೊಂಡು ತಾಯಿ ಮೇಲೆ ನಿರಂತರ ಹಲ್ಲೆ ನಡೆಸುತ್ತಿದ್ದ. ಇತ್ತೀಚಿಗೆ ಹಲ್ಲೆ ನಡೆಸಿ ತಾಯಿಯ ಕಾಲು ಮುರಿದಿದ್ದಾನೆ. ಈತನ ಮಾನಸಿಕ ಅಸ್ವಸ್ಥತೆ ಹೆಚ್ಚಿದ ಕಾರಣ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದ್ದು, ಅಲ್ಲಿಂತ ಆತ ಪರಾರಿಯಾಗಿದ್ದ.

ಇದರಿಂದ ಆತಂಕಿತರಾದ ತಾಯಿ ಮನೆಗೆ ಹೋಗಲು ಭಯ ಪಡುತ್ತಿದ್ದು, ತನಗೆ ರಕ್ಷಣೆ ಹಾಗೂ ಆಶ್ರಯ ನೀಡುವಂತೆ ಗೋಗರೆಯುತ್ತಿದ್ದರು. ಅವರನ್ನು ರಕ್ಷಣೆ ಮಾಡಿ ಸಖೀ ಸೆಂಟರ್‌ನಲ್ಲಿ ಆಶ್ರಯ ಕಲ್ಪಿಸಲಾಗಿದೆ. ಮಹಿಳೆಯ ಆರ್ಥಿಕ ಪರಿಸ್ಥಿತಿ ಶೋಚನೀಯವಾಗಿದ್ದು, ಸಂಬಂಧಪಟ್ಟ ಇಲಾಖೆಗಳು ಆಕೆಗೆ ಜೀವನ ನಡೆಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ವಿಶು ಶೆಟ್ಟಿ ಮನವಿ ಮಾಡಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ