ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ – ಆರೋಪಿ ನವೀನ್ ನಾಯ್ಕ್ ಬಂಧನ

ಮಣಿಪಾಲ : ಮಣಿಪಾಲ ಠಾಣೆ ವ್ಯಾಪ್ತಿಯ ಅನಂತನಗರ ಹಿಂದುಳಿದ ವರ್ಗದವರ ಮೆಟ್ರಿಕ್ ನಂತರದ ಹಾಸ್ಟಲ್‌ಗೆ ಅಕ್ರಮ ಪ್ರವೇಶ ಮಾಡಿ ಕಿಟಕಿಯ ಬಳಿ ಮಂಚದಲ್ಲಿ ಮಲಗಿಕೊಂಡಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಳ್ಳಿ ಗ್ರಾಮದ ನವೀನ್ ನಾಯ್ಕ್ (22) ಗ್ರಾಮ ಬಂಧಿತ ಆರೋಪಿ.

ಆರೋಪಿ ನವೀನ್ ನಾಯ್ಕ್ 2023ರಲ್ಲಿ ಉಡುಪಿ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಭಾಗಿಯಾಗಿದ್ದು, ಈತನ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

ಕಾರ್ಯಾಚರಣೆಯಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕರಾದ ದೇವರಾಜ್.ಟಿ.ವಿ, ಪಿ.ಎಸ್.ಐ ರಾಘವೇಂದ್ರ, ಪಿ.ಎಸ್.ಐ ಅಕ್ಷಯ ಕುಮಾರಿ, ಎ.ಎಸ್.ಐ ವಿವೇಕ್, ಇಮ್ರಾನ್, ಪ್ರಸನ್ನ, ರಘು, ಮಂಜುನಾಥ ಹಾಗೂ ಜ್ಯೋತಿ ಭಾಗವಹಿಸಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ