ಇಡಿಯಿಂದ ದ್ವೇಷದ ಕ್ರಮ, ರಾಜಕೀಯ ಪ್ರೇರಿತ ದಾಳಿ – ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ

ಉಡುಪಿ : ಇಡಿಯವರು ತಮ್ಮ ಪರಿಮಿತಿಯನ್ನು ಮೀರಿ ರೈಡ್ ಮಾಡುತ್ತಿದ್ದಾರೆ. ಇ ಡಿ ಅವರಲ್ಲಿ ಅತ್ಯುತ್ಸಾಹ ಕಾಣುತ್ತಿದೆ. ಇದು ಇಡಿಯವರ ದ್ವೇಷದ ಕ್ರಮ, ರಾಜಕೀಯ ಪ್ರೇರಿತ ಅಂತ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಮುಡಾ ಪ್ರಕರಣ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ನ್ಯಾಯಾಲಯದ ಆದೇಶದಂತೆ ತನಿಖೆ ನಡೆಯುತ್ತಿದೆ. ಹಾಗಾದರೆ ಇ ಡಿ ಅವರಿಗೆ ಅಲ್ಲಿ ಏನು ಕೆಲಸ? ರಾಜ್ಯ ಸರ್ಕಾರದ ಹೆಸರು ಕೆಡಿಸಲು ಈ ರೀತಿ ಮಾಡಲು ಬಿಜೆಪಿ ಪ್ರೇರಣೆ ನೀಡಿದೆ ಎಂದು ಹೇಳಿದ್ದಾರೆ.

ಮುಡಾ ಹಗರಣದ ಫೈಲ್‌ನ್ನು ಬೈರತಿ ಸುರೇಶ್ ಸುಟ್ಟು ಹಾಕಿದ್ದಾರೆ ಎಂಬ ಶೋಭಾ ಆರೋಪ ವಿಚಾರವಾಗಿ ಮಾತನಾಡಿದ ಅವರು, ಕುಣಿಯಲು ಆಗದವನು ಅಂಗಳ ಸರಿಯಿಲ್ಲ ಎಂದನಂತೆ. ಶೋಭಾ ಕರಂದ್ಲಾಜೆಗೆ ಮಾಹಿತಿಯ ಕೊರತೆ ಇದೆ. ನೀವು ಯಾಕೆ ಹಿಟ್ ಅಂಡ್ ರನ್ ಮಾಡುತ್ತೀರಿ? ಎಲ್ಲಾ ವಿಚಾರಗಳಿಗೂ ನಮ್ಮಲ್ಲಿ ದಾಖಲೆಗಳು ಇವೆ. ಮೂರು-ನಾಲ್ಕು ಏಜೆನ್ಸಿಗಳಲ್ಲಿ ಈ ಎಲ್ಲ ವಿಚಾರ ಚರ್ಚೆ ಆಗಿದೆ. ದಾಖಲೆ ಸಾಗಿಸಿದ್ದಾರೆ ಅನ್ನೋದೇ ಸುಳ್ಳು ಎಂದು ಹೇಳಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಪ್ರಹ್ಲಾದ್ ಜೋಷಿ ಸಹೋದರ ಟಿಕೆಟ್‌ಗಾಗಿ ಎರಡು ಕೋಟಿ ರೂ. ಹಣ ಪಡೆದು ವಂಚಿಸಿದ್ದರೆ ಅದರ ಬಗ್ಗೆ ಸೂಕ್ತ ಕ್ರಮವಾಗಲಿ ಎಂದು ಹೇಳಿದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು