ಶಿರಾಡಿ ಘಾಟ್‌ನಲ್ಲಿ ರಾಜಹಂಸ‌ – ಐರಾವತ ಬಸ್ಸುಗಳ ಮುಖಾಮುಖಿ ಡಿಕ್ಕಿ‌; ಅಪಘಾತ ತಪ್ಪಿಸಲು ಹೋಗಿ ಟೆಂಪೋ‌ ಚರಂಡಿಗೆ

ಬೆಳ್ತಂಗಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನ ಮಾರನಹಳ್ಳಿ ಕೆಳಗಡೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಶನಿವಾರ ನಡೆದಿದೆ.

ರಾಜಹಂಸ‌ ಬಸ್ ಹಾಗೂ ಐರಾವತ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಅಪಘಾತ ತಪ್ಪಿಸಲು ಹೋಗಿ ಟೆಂಪೋ‌ ಚರಂಡಿಗೆ ಬಿದ್ದಿದೆ. ಈ ಅಪಘಾತದಲ್ಲಿ ಎರಡೂ ಬಸ್ಸುಗಳ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅಪಘಾತದ ಹಿನ್ನಲೆಯಲ್ಲಿ ಕೆಲಹೊತ್ತು ಸಂಚಾರ ಸ್ಥಗಿತಗೊಂಡಿದ್ದು, ಬಳಿಕ ಕಾರ್ಯಾಚರಣೆ ನಡೆಸಿ ಅಪಘಾತ ನಡೆದ ಬಸ್ಸುಗಳನ್ನು ತೆರವುಗೊಳಿಸಲಾಗಿದೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ