ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ : ಯುವಕ ಮೃತ್ಯು

ಉಡುಪಿ : ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ ಸರ್ವೀಸ್ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತ ಬೈಕ್ ಸವಾರನನ್ನು ಕುಂದಾಪುರದ ಬರೆಕಟ್ಟುವಿನ ಬಾಳೆಹಿತ್ಲು ನಿವಾಸಿಯಾದ ಪೈಂಟರ್ ವೆಂಕಟೇಶ್ ಅವರ ಪುತ್ರ ಶಶಾಂಕ್ ಮೊಗವೀರ (22) ಎಂದು ಗುರುತಿಸಲಾಗಿದೆ.

ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಶಶಾಂಕ ಮೊಗವೀರ ಅವರು ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಗಂಭೀರ ಗಾಯಗೊಂಡ ಶಶಾಂಕ್ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಬುಲೆಟ್ ಸವಾರ ಮತ್ತು ಹಿಂದೆ ಕುಳಿತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನು ಮಣಿಪಾಲದ ಕೆಎಂಸಿಗೆ ದಾಖಲಿಸಲಾಗಿದೆ. ಕುಂದಾಪುರ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ