ಗುಜರಿ ಅಂಗಡಿ ಗೋಡೌನ್‌ನಲ್ಲಿ ಭಾರೀ ಬೆಂಕಿ ಅವಘಡ – ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಉಡುಪಿ : ಉಡುಪಿ ನಗರದ ಅಂಬಾಗಿಲು-ಪೆರಂಪಳ್ಳಿ ರಸ್ತೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪೆರಂಪಳ್ಳಿ ಸಮೀಪದ ಗುಜರಿ ಅಂಗಡಿಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹನಿಫ್ ಎಂಬರಿಗೆ ಸೇರಿದ ಗುಜರಿ ಅಂಗಡಿ ಇದಾಗಿದೆ.

ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ಬಳಿಕ ಆಸುಪಾಸಿಗೂ ವ್ಯಾಪಿಸಿದೆ. ಭಾರೀ ಹೊಗೆಯಿಂದ ಈ ಪ್ರದೇಶ ಆವರಿಸಿಕೊಂಡಿದ್ದು
ಅಕ್ಕ ಪಕ್ಕದ ಮನೆಯವರನ್ನು ಅಗ್ನಿಶಾಮಕ ಸಿಬ್ಬಂದಿ ತೆರವು ಮಾಡಿದರು. ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದ್ದು ಗುಜರಿ ಅಂಗಡಿಯಾದ ಕಾರಣ ಗೋಡೌನ್‌ನಲ್ಲಿ ಬೇಗ ಉರಿಯುವ ಎಣ್ಣೆಯಂತಹ ಸಾಮಗ್ರಿ ಇದ್ದಿರಬಹುದು ಎಂದು ಅಂದಾಜಿಸಲಾಗಿದೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಆದರೆ ಭಾರೀ ಪ್ರಮಾಣದ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.

Related posts

ಮಣ್ಣಪಳ್ಳ ಕೆರೆ ಸಮಗ್ರ ಅಭಿವೃದ್ಧಿ ಹಾಗೂ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಿ : ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ

ವೈದ್ಯಕೀಯ ಶಿಕ್ಷಣದಲ್ಲಿ ಆಧುನಿಕ VR-ಆಧಾರಿತ ಕೌಶಲ ತರಬೇತಿಗೆ ಮೆಡಿಸಿಮ್ ವಿಆರ್‌ನೊಂದಿಗೆ ಮಾಹೆ ಒಪ್ಪಂದ

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ