ಉಡುಪಿ ಜಿಲ್ಲೆಯಾದ್ಯಂತ ನಿನ್ನೆಯಿಂದ ಭಾರೀ ಮಳೆ

ಉಡುಪಿ : ಜಿಲ್ಲೆಯಾದ್ಯಂತ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು ಕರಾವಳಿ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ ರೆಡ್ ಅಲರ್ಟ್‌ ಘೋಷಣೆ ಮಾಡಿದೆ.

ನಿನ್ನೆಯಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಇಂದು ಕೂಡ ಮುಂದುವರೆದಿದೆ. ಮುಂದಿನ 24 ತಾಸು ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು ಗಂಟೆಗೆ 40ರಿಂದ 50ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ.

ಈ ಹಿನ್ನೆಲೆಯಲ್ಲಿ ಇಂದು ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ. ಆದರೆ ಜಿಲ್ಲೆಯಲ್ಲಿ ಇಂದು ಶಾಲೆ ಕಾಲೇಜುಗಳಿಗೆ ರಜೆ ಘೋಷಣೆಯಾಗಿಲ್ಲ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ